ಬೆಂಗಳೂರು: ಮಂಗಳೂರು ಗೋಲಿಬಾರ್ ಪ್ರಕರಣವನ್ನು ಮ್ಯಾಜಿಸ್ಟೀಯರಿಯಲ್ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟೀರಿಯಲ್ ತನಿಖೆಗೆ ವಹಿಸಿದ ಸರ್ಕಾರ - ಗೋಲಿಬಾರ್ ಪ್ರಕರಣ ಮ್ಯಾಜಿಸ್ಟ್ರೇಟ್ ವಿಚಾರಣೆ
ಮಂಗಳೂರು ಗೋಲಿಬಾರ್ ಪ್ರಕರಣವನ್ನು ಮ್ಯಾಜಿಸ್ಟೀಯರಿಯಲ್ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಗಲಭೆಯ ಸ್ವರೂಪ ಪಡೆದ ವೇಳೆ ಗೋಲಿಬಾರ್ಗೆ ಇಬ್ಬರು ಯುವಕರು ಮೃತಪಟ್ಟ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರನ್ನ ತನಿಖಾ ಕಾರ್ಯನಿರ್ವಾಹಕ ದಂಡಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ. ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸರ್ಕಾರ ಸೂಚನೆ ನೀಡಿದೆ.
ನೌಶೀನ್, ಜಲೀಲ್ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ವಿಚಾರಣೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ಸಿಐಡಿ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದ ಸಿಎಂ, ಇದೀಗ ಮ್ಯಾಜಿಸ್ಟೀರಿಯಲ್ ತನಿಖೆಗೂ ಆದೇಶ ಹೊರಡಿಸಿದ್ದಾರೆ.