ಬೆಂಗಳೂರು: ಮಂಗಳೂರು ಗಲಭೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಗಲಭೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಬಿಎಸ್ವೈ - ಮಂಗಳೂರು ಗಲಭೆ ಪ್ರಕರಣ
ಮಂಗಳೂರು ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈಗಾಗಲೇ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ. ಇನ್ನಾದರು ಮಂಗಳೂರು ಶಾಂತವಾಗಿರುತ್ತೆ ಎಂದು ಭಾವಿಸಿದ್ದೇನೆ. ಸದ್ಯ ಮಂಗಳೂರು ಘಟನೆಯ ತನಿಖೆ ನಡೆಸಲು ಸಿಐಡಿಗೆ ವಹಿಸಲಾಗಿದೆ ಎಂದರು.
ಸಿಎಎ ಕಾನೂನಿನಿಂದ ಅಲ್ಪಸಂಖ್ಯಾತರು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ. ಈಗಾಗಲೇ ಈ ದೇಶದ ಯಾವೊಬ್ಬ ಅಲ್ಪ ಸಂಖ್ಯಾತನಿಗೂ ತೊಂದರೆ ಆಗಲ್ಲವೆಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಇಷ್ಟಾದರೂ ಕೂಡ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ನ ಷಡ್ಯಂತ್ರ, ಪಿತೂರಿಯಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಈ ಬಗ್ಗೆ ಜನರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ರು.