ಕರ್ನಾಟಕ

karnataka

By

Published : Oct 1, 2019, 5:37 AM IST

ETV Bharat / city

ಬಿಬಿಎಂಪಿಯಲ್ಲಿ ಮುಂದುವರಿದ ದೋಸ್ತಿ... ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ

ಇಂದು ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಮುಂದುವರಿದಿದೆ. ಅಂತೆಯೇ ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಗಂಗಮ್ಮ ರಾಜಣ್ಣ ನಾಮಪತ್ರ ಸಲ್ಲಿಸಲಿದ್ದಾರೆ.

ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಂದುವರಿಕೆಗೆ ಜೆಡಿಎಸ್-ಕಾಂಗ್ರೆಸ್​​ ವರಿಷ್ಠರು ಹಸಿರು ನಿಶಾನೆ ತೋರಿಸಿರುವುದರಿಂದ ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಗಂಗಮ್ಮ ರಾಜಣ್ಣ ಅವರನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ನಗರ ಅಧ್ಯಕ್ಷ ಆರ್. ಪ್ರಕಾಶ್ ತಿಳಿಸಿದ್ದಾರೆ.

ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ

ಶಕ್ತಿ ಗಣಪತಿನಗರ ವಾರ್ಡ್​ನ ಸದಸ್ಯೆ ಗಂಗಮ್ಮ ರಾಜಣ್ಣ ಅವರನ್ನು ಉಪ ಮೇಯರ್ ಸ್ಥಾನಕ್ಕೆ ಅಂತಿಮಗೊಳಿಸಲಾಗಿದ್ದು, ಇಂದು ಬೆಳಗ್ಗೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಪಾಲಿಕೆ ಸದಸ್ಯರಾದ ಇಮ್ರಾನ್ ಪಾಷ ಹಾಗೂ ನೇತ್ರಾ ನಾರಾಯಣ್ ಅವರ ಹೆಸರುಗಳು ಉಪ ಮೇಯರ್ ಸ್ಥಾನಕ್ಕೆ ಕೇಳಿಬಂದಿದ್ದವು. ಆದರೆ ಅಂತಿಮವಾಗಿ ಗಂಗಮ್ಮ ಅವರನ್ನು ಜೆಡಿಎಸ್ ನಾಯಕರು ಅಂತಿಮಗೊಳಿಸಿದ್ದಾರೆ.

ನಮ್ಮ ಪಕ್ಷದಿಂದ ಉಪ ಮೇಯರ್ ಅಭ್ಯರ್ಥಿ ಹಾಕುತ್ತೇವೆ. ಈಗಾಗಲೇ ಉಪ ಮೇಯರ್ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ ಎಂದು ಪ್ರಕಾಶ್ ಹೇಳಿದರು.

ABOUT THE AUTHOR

...view details