ಬೆಂಗಳೂರು:ಚಂದನವನಕ್ಕೆ ಡ್ರಗ್ಸ್ ನಂಟು ಆರೋಪದ ತನಿಖೆ ದಿನದಿಂದ ದಿನಕ್ಕೆ ಚುರುಕಾಗುತ್ತಿದೆ. ಮಾದಕಲೋಕದಲ್ಲಿ ಡ್ರಗ್ಸ್ ನಂಟಿನ ಬಗ್ಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ಕಲೆಹಾಕುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆರೋಪದಲ್ಲಿ ಸಿಲುಕಿರುವ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
'ಮಾದಕ' ನಟಿಯರಿಗೆ ವೈದ್ಯಕೀಯ ಪರೀಕ್ಷೆ: ರಾಗಿಣಿಗೆ ಲೋ ಬಿ.ಪಿ, ಸಂಜನಾಗೆ ಉಸಿರಾಟದ ತೊಂದರೆ..! - kc general hospital
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲ ನಂಟು ಆರೋಪದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲಾ ಅವರ ನಿಗಾವಣೆಯಲ್ಲಿ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅದರ ಅಂಗವಾಗಿ ಇಬ್ಬರ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ನಟಿ ರಾಗಿಣಿಗೆ ಕಡಿಮೆ ರಕ್ತದೊತ್ತಡ ಇರುವ ಕಾರಣದಿಂದ ಬಿ.ಪಿ. ಚೆಕಪ್ ಮಾಡಲಾಗಿದೆ.
ರಾಗಿಣಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಿದೆ. ಸಂಜನಾಗೂ ಜೀರ್ಣಕ್ರಿಯೆ ಹಾಗೂ ಉಸಿರಾಟದ ತೊಂದರೆಯಿದ್ದು, ಇನ್ನೂ ಹಲವು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಸದ್ಯಕ್ಕೆ ಇಬ್ಬರೂ ನಟಿಯರು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿಯೇ ಇದ್ದು, ಇದಾದ ನಂತರ ಎಫ್ ಎಸ್ಎಲ್ ಕಚೇರಿಯಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.