ಬೆಂಗಳೂರು:ಕುಟುಂಬ ಸದಸ್ಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದ ಹಿನ್ನೆಲೆಯಲ್ಲಿ, ಹೋಂ ಕ್ವಾರಂಟೈನ್ಗೆ ಒಳಗಾಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೊರೊನಾ ಪರೀಕ್ಷೆ ಎರಡನೇ ಬಾರಿಗೆ ನೆಗಟಿವ್ ಬಂದಿದ್ದು, ಮಂಗಳವಾರದಿಂದ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.
ಮಂಗಳವಾರದಿಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಬ್ಯಾಕ್ ಟು ವರ್ಕ್...!
ತಂದೆ, ಪತ್ನಿ, ಮಗಳು ಹಾಗೂ ಅಡುಗೆ ಕೆಲಸದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ, ಸಚಿವ ಸುಧಾಕರ್ ಕಳೆದ 8 ದಿನಗಳಿಂದ ಹೋಂ ಕ್ವಾರಂಟೈನ್ನಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಂಗಳವಾರದಿಂದ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.
ತಂದೆ, ಪತ್ನಿ, ಮಗಳು ಹಾಗೂ ಅಡುಗೆ ಕೆಲಸದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ, ಸಚಿವ ಸುಧಾಕರ್ ಕಳೆದ 8 ದಿನಗಳಿಂದ ಹೋಂ ಕ್ವಾರಂಟೈನ್ನಲ್ಲಿದ್ದರು. ಕೋವಿಡ್ -19 ಪರೀಕ್ಷಾ ವರದಿ ನೆಗಟಿವ್ ಎಂದು ಬಂದಿದ್ದರೂ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು. ಮನೆಯಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಇದೀಗ ಎರಡನೇ ಬಾರಿಯ ಕೋವಿಡ್ ವರದಿಯೂ ನೆಗಟಿವ್ ಬಂದಿದ್ದು, ಮಂಗಳವಾರದಿಂದ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ನನ್ನ ಕುಟುಂಬದ ಕೆಲವು ಸದಸ್ಯರಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ ಎಂಟು ದಿನಗಳಿಂದ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಈಗ ಮತ್ತೊಮ್ಮೆ ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದರಿಂದ ಮಂಗಳವಾರದಿಂದ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ನನ್ನ ಕುಟುಂಬ ಸದಸ್ಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಧನ್ಯವಾದ ಸಲ್ಲಿಸಿದ್ದಾರೆ.