ಬೆಂಗಳೂರು:ಭಾರತ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಗೆದ್ದು ಇಂದಿಗೆ 37 ವರ್ಷಗಳಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಐತಿಹಾಸಿಕ ಕ್ಷಣವನ್ನ ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ.
ಭಾರತ ಕ್ರಿಕೆಟ್ ತಂಡದ ಐತಿಹಾಸಿಕ ಕ್ಷಣ ನೆನೆದು ಸಚಿವ ಸುಧಾಕರ್ ಟ್ವೀಟ್ - ಬೆಂಗಳೂರು ಸುದ್ದಿ
ತಂದೆ, ಪತ್ನಿ, ಪುತ್ರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಇದರ ನಡುವೆಯೂ ಭಾರತೀಯ ಕ್ರಿಕೆಟ್ ತಂಡದ ಐತಿಹಾಸಿಕ, ಅವಿಸ್ಮರಣೀಯ ಕ್ಷಣಗಳನ್ನ ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಐತಿಹಾಸಿಕ ಕ್ಷಣ ನೆನೆದು ಸಚಿವ ಕೆ.ಸುಧಾಕರ್ ಟ್ವೀಟ್
ತಂದೆ, ಪತ್ನಿ, ಪುತ್ರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಸಚಿವ ಸುಧಾಕರ್ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಇದರ ನಡುವೆಯೂ ಭಾರತೀಯ ಕ್ರಿಕೆಟ್ ತಂಡದ ಐತಿಹಾಸಿಕ, ಅವಿಸ್ಮರಣೀಯ ಕ್ಷಣಗಳನ್ನು ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ. ಭಾರತ ಕ್ರಿಕೆಟ್ ತಂಡ ಇದೇ ದಿನ 37 ವರ್ಷದ ಹಿಂದೆ ವಿಶ್ವಕಪ್ ಗೆದ್ದಿತ್ತು.
1983ರಲ್ಲಿ ಲಾರ್ಡ್ಸ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಬೀಗಿತ್ತು. ಅಂದು ಕ್ರಿಕೆಟ್ ತಂಡದ ನಾಯಕರಾಗಿದ್ದ ಕಪಿಲ್ ದೇವ್ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದ್ದರು ಎಂದು ಟ್ವೀಟ್ ಮಾಡಿದ್ದಾರೆ.