ಬೆಂಗಳೂರು: ಶುಲ್ಕ ಕಟ್ಟದ ಮಕ್ಕಳಿಗೆ ಆನ್ಲೈನ್ ಕ್ಲಾಸ್ ಸ್ಥಗಿತಗೊಳಿಸಲು ಖಾಸಗಿ ಶಾಲೆಗಳು ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸಭೆ ಕರೆದಿದೆ.
ಶುಲ್ಕ ಕಟ್ಟದ ಮಕ್ಕಳಿಗೆ ಆನ್ಲೈನ್ ಕ್ಲಾಸ್ ಸ್ಥಗಿತ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಭೆ
ಖಾಸಗಿ ಶಾಲೆಗಳ ಸಂಘಟನೆಯ ಪ್ರತಿನಿಧಿಗಳ ಜೊತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಭೆ
ಖಾಸಗಿ ಶಾಲೆಗಳ ಸಂಘಟನೆಯ ಪ್ರತಿನಿಧಿಗಳ ಜೊತೆ ಆಯುಕ್ತ ವಿ.ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆ ನಡೆಸಿದ ಬಳಿಕ ಸಂಪೂರ್ಣ ವರದಿ ನೀಡುವಂತೆ ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
KAMS, MISCA-K, KUSMA, RUPSA, ಕರ್ನಾಟಕ ICSE ಸಂಘಟನೆ, ಮೈನಾರಿಟಿ ಶಾಲೆಗಳ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದೆ.