ಬೆಂಗಳೂರು: ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬೆಂಗಳೂರು ಶಾಸಕರು ಸಭೆ ನಡೆಸಿದ್ದಾರೆ.
ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಂಡೂರಾವ್, ಪರಿಷತ್ ಸದಸ್ಯ ಪಿ.ಆರ್. ರಮೇಶ್ ಸೇರಿದಂತೆ ಬೆಂಗಳೂರು ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಭಾಗಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಬಿಬಿಎಂಪಿ ಚುನಾವಣಾ ತಯಾರಿ, ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಚಾರ ಕೂಡ ಇದೇ ಸಂದರ್ಭ ಪ್ರಸ್ತಾಪವಾಗಿದ್ದು, ಕಾಂಗ್ರೆಸ್ನಿಂದ ಪರಿಷತ್ ಸಭಾಪತಿ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ. ಪರಿಷತ್ ಹಿರಿಯ ಸದಸ್ಯ ಹಾಗೂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಸೀರ್ ಅಹ್ಮದ್ ಅವರನ್ನು ಕಾಂಗ್ರೆಸ್ನಿಂದ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.