ಬೆಂಗಳೂರು: ನಗರದ ಡಿ.ಜೆ.ಹಳ್ಳಿ ಹಿಂಸಾಚಾರ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಭೆ ಆರಂಭವಾಗಿದೆ.
ಡಿ.ಜೆ.ಹಳ್ಳಿ ಗಲಭೆ: ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಶಾಸಕರು, ಮುಖಂಡರ ಸಭೆ - ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಶಾಸಕರು ಮುಖಂಡರ ಸಭೆ
ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಕುರಿತು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ಶಾಸಕರು, ಪಕ್ಷದ ಪಾಲಿಕೆ ಸದಸ್ಯರು ಸೇರಿದ್ದು ಚರ್ಚೆ ನಡೆಸುತ್ತಿದ್ದಾರೆ.
ಡಿಜೆ ಹಳ್ಳಿ ಗಲಭೆ ಪ್ರಕರಣ: ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಶಾಸಕರು ಮುಖಂಡರ ಸಭೆ
ಈ ಸಭೆಯಲ್ಲಿ ಮಾಜಿ ಸಚಿವ, ಶಾಸಕರಾದ ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್, ರಿಜ್ವಾನ್ ಅರ್ಷದ್, ಕೃಷ್ಣ ಭೈರೇಗೌಡ, ನಸೀರ್ ಅಹಮ್ಮದ್, ಎಂ. ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹಮ್ಮದ್, ಮಾಜಿ ಮೇಯರ್ ಸಂಪತ್ ರಾಜ್, ಹುಚ್ಚಪ್ಪ, ರಾಮಚಂದ್ರಪ್ಪ ಸೇರಿದಂತೆ ಹಲವು ಬೆಂಗಳೂರಿನ ಕಾಂಗ್ರೆಸ್ ಶಾಸಕರು, ಬಿಬಿಎಂಪಿ ಸದಸ್ಯರು ಭಾಗಿಯಾಗಿದ್ದಾರೆ.
Last Updated : Aug 12, 2020, 2:57 PM IST