ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿ ಜೂನ್ 2ರತನಕ ಮಳೆ ಸಾಧ್ಯತೆ : ಚಾಮರಾಜನಗರ, ಹಾಸನ, ಮೈಸೂರಿನಲ್ಲಿ ಭಾರೀ ಮಳೆ ಮುನ್ಸೂಚನೆ - State Rainfall Report

ಮಾನ್ಸೂನ್​ ಮಳೆ ಶುರುವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ..

meteorological-department
ಭಾರೀ ಮಳೆ ಮುನ್ಸೂಚನೆ

By

Published : May 31, 2022, 5:35 PM IST

ಬೆಂಗಳೂರು :ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.‌ ಈ ಕುರಿತು ಪ್ರಕಟಣೆ ಹೊರಡಿಸಿರುವ ಇಲಾಖೆ, ಜೂನ್ 2ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚಿನ ಸಾಧ್ಯತೆಯಿದೆ.

ಭಾರೀ ಮಳೆ ಮುನ್ನೆಚ್ಚರಿಕೆ :ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ :ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದೆ. ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಓದಿ:ಟ್ರಾಫಿಕ್​ ಪೊಲೀಸ್​​​​​​​ ಜೊತೆ ಸಂಚಾರ ನಿಯಂತ್ರಣದ ಕೆಲಸ ನಿರ್ವಹಿಸಿದ 7 ರ ಬಾಲಕ !

ABOUT THE AUTHOR

...view details