ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸದಿಂದ 6,500 ಬಿಸಿಯೂಟ ಕಾರ್ಯಕರ್ತೆಯರ ವಜಾಗೊಳಿಸಿದ ಹಿನ್ನೆಲೆಯಲ್ಲಿ ಫ್ರೀಡಂಪಾರ್ಕ್ನಲ್ಲಿ ಕಾರ್ಯಕರ್ತೆಯರು ಸೇರಿ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದಾರೆ.
ಬೆಂಗಳೂರು: 2ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ - ಈಟಿವಿ ಭಾರತ್ ಕನ್ನಡ
6,500 ಮಂದಿ ಬಿಸಿಯೂಟ ಕಾರ್ಯಕರ್ತೆಯರ ವಜಾ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.
2ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ
ಬೇಡಿಕೆಗಳೇನು?
- 60 ವರ್ಷ ಮೇಲ್ಪಟ್ಟ ನೌಕರರನ್ನು ಕೆಲಸದಿಂದ ವಜಾಗೊಳಿಸುವಾಗ 1 ಲಕ್ಷ ರೂ ನಿವೃತ್ತಿ ವೇತನ ಕೊಡಬೇಕು.
- ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು, ಇವರನ್ನು ಸರ್ಕಾರಿ ಕಾರ್ಮಿಕರೆಂದು ಗುರುತಿಸಬೇಕು.
- ಬಜೆಟ್ನಲ್ಲಿ ಘೋಷಣೆ ಮಾಡಿದ್ದ 1 ಸಾವಿರ ರೂ. ಗಳನ್ನು ಜಾರಿ ಮಾಡಬೇಕು.
- ಬೇಸಿಗೆ ಮತ್ತು ದಸರಾ ರಜೆಗಳ ವೇತನ ಕಟ್ಟಿಕೊಡಬೇಕು.
- ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ನೀಡಬೇಕು.
- ಬಿಸಿಯೂಟ ನೌಕರರ ವೇತನವನ್ನು 5 ಸಾವಿರಕ್ಕೆ ಹೆಚ್ಚಳ ಮಾಡಬೇಕು.
ಇದನ್ನೂ ಓದಿ :ಕ್ಲಬ್ಹೌಸ್ನಲ್ಲಿ ಪಾಕಿಸ್ತಾನ ಪರ ಘೋಷಣೆ: ದೇಶದ್ರೋಹಿಗಳ ವಿರುದ್ಧ ತೀವ್ರ ಆಕ್ರೋಶ