ಬೆಂಗಳೂರು :ಮುನಿಸು ಮರೆತ ಸಚಿವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್, ಶಾಸಕ ರಾಜೂಗೌಡ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಆನಂದ್ ಸಿಂಗ್ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾನು ಭೇಟಿ ಮಾಡಿದ್ದೆ. ಅವರಿಗೆ ನನ್ನ ಮನವಿ ಮುಟ್ಟಿಸಿದ್ದೇನೆ. ಸಿಎಂ ಕೂಡ ವರಿಷ್ಠರ ಜೊತೆ ಚರ್ಚಿಸುತ್ತೇನೆ ಎಂದಿದ್ದಾರೆ. ಹೀಗಾಗಿ, ಪಕ್ಷ ಹಾಗೂ ಅವರ ಮಾತಿಗೆ ಬೆಲೆ ನೀಡುತ್ತಿದ್ದೇನೆ. ನಾನು ಇದೀಗ ಅಧಿಕಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.