ಕರ್ನಾಟಕ

karnataka

ETV Bharat / city

ಮತೀಯ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು : ಸಚಿವ ಆರಗ ಜ್ಞಾನೇಂದ್ರ - ಹಿಜಾಬ್​ ಕೇಸರಿ ಶಾಲು ವಿವಾದ

ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕ ಅಭಿಪ್ರಾಯ ಅಲ್ಲ ಎಂಬುದು ನನ್ನ ಅನಿಸಿಕೆ. ನಾವೆಲ್ಲರೂ ನ್ಯಾಯಾಲಯದ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು, ಅದರಂತೆ ನಡೆದುಕೊಳ್ಳಬೇಕು..

minister Araga Jnanendra
ಗೃಹ ಸಚಿವ ಆರಗ ಜ್ಞಾನೇಂದ್ರ

By

Published : Feb 15, 2022, 2:19 PM IST

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಎಲ್ಲಾ ಶಾಲಾ-ಕಾಲೇಜುಗಳು ಪುನಾರಂಭ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದೇ ಆತಂಕ ಅಥವಾ ಅಭದ್ರತೆಯ ಭಾವನೆ ಹೊಂದದೇ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕ ಅಭಿಪ್ರಾಯ ಅಲ್ಲ ಎಂಬುದು ನನ್ನ ಅನಿಸಿಕೆ. ನಾವೆಲ್ಲರೂ ನ್ಯಾಯಾಲಯದ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು, ಅದರಂತೆ ನಡೆದುಕೊಳ್ಳಬೇಕು ಎಂದರು.

ಇದನ್ನೂ ಓದಿ:ಟೀಚರ್ ಗಳೂ ಹಿಜಾಬ್ ಹಾಕುವಂತಿಲ್ಲ, ಮಕ್ಕಳಿಗೆ ಇರುವುದು ಟೀಚರ್‌ಗೂ ಅನ್ವಯ : ರಘುಪತಿ ಭಟ್

ಕೆಲವು ಮತೀಯ ಸಂಘಟನೆಗಳು ಮುಗ್ಧ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಸಮಾಜ ಹಾಗೂ ಮನಸ್ಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರನ್ನು ಗುರುತಿಸಿ ತಕ್ಕ ಕಾನೂನು ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details