ಬೆಂಗಳೂರು: ಭಾರತೀಯ ಜನತಾ ಪಾರ್ಟಿ ನನ್ನ ಮೇಲೆ ವಿಶ್ವಾಸ ಇಟ್ಟು ಎರಡು ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಕಳಂಕ ಇರದ ರೀತಿ ನಡೆದುಕೊಂಡು ಹೋಗುತ್ತೇನೆ. ಜೆಡಿಎಸ್ ಇರುವ ಕಡೆ ಉಸ್ತುವಾರಿ ಸವಾಲು ವಿಚಾರಕ್ಕೆ ಸಂಬಂಧಿಸಿದಂತೆ ಶಾಂತ ರೀತಿಯಿಂದ ಜಿಲ್ಲೆ ಹಾಗೂ ಕ್ಷೇತ್ರದ ಬಗ್ಗೆ ಸಿಎಂ ಗಮನಕ್ಕೆ ತಂದು ಎಲ್ಲವೂ ಒಂದೇ ದೃಷ್ಟಿಯಿಂದ ನಿಭಾಯಿಸುತ್ತೇನೆ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಎರಡು ಜಿಲ್ಲಾ ಉಸ್ತುವಾರಿ ನೀಡಿರುವುದು ಪಕ್ಷ ಹಾಗೂ ಸಿಎಂ ನಿರ್ಧಾರ. ನಾಳೆ ಮಂಡ್ಯಕ್ಕೆ ಹೋಗುತ್ತಿದ್ದೇನೆ. ಆಹಾರ ಇಲಾಖೆ ಹಾಗೂ ಅಬಕಾರಿ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ್ದೇನೆ. ಮಂಡ್ಯ ಜಿಲ್ಲೆಯನ್ನ ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಕೋವಿಡ್ ಉಸ್ತುವಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. 31 ಜಿಲ್ಲೆಗಳ ಪೈಕಿ 28 ಸಚಿವರುಗಳಿಗೆ ಸಿಎಂ ಹಂಚಿಕೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ ಅವರಿಗೆ ಹಾಸನ ಮತ್ತು , ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸಲಾಗಿದೆ.
ಇದನ್ನೂ ಓದಿ:ಎಲ್ಲರಿಗೂ ಮಾನಸಿಕ ಆರೋಗ್ಯದ ತಪಾಸಣೆ ಅಗತ್ಯ: ಸಚಿವ ಸುಧಾಕರ್