ಕರ್ನಾಟಕ

karnataka

ETV Bharat / city

ಸರ್ಕಾರ ಎಂಎಸ್‌ಎಂಇಗೆ ನೀಡಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ :‌ ಸಚಿವ ಜಗದೀಶ್‌ ಶೆಟ್ಟರ್‌ - ಸಣ್ಣ ಕೈಗಾರಿಕೆಗಳು

ಸಾರ್ಥಕ್‌ ಆನ್‌ಲೈನ್‌ ಪ್ಲಾಟ್‌ಫಾರಂ ಮುಖಾಂತರ ಸಣ್ಣ ಕೈಗಾರಿಕೆಗಳು ಮತ್ತು ಹಲವಾರು ಪಾಲುದಾರರ ಮಧ್ಯೆ ಸಂಪರ್ಕ ಕೊಂಡಿಯನ್ನು ನಿರ್ಮಿಸಿದ್ದೇವೆ. ಇದರ ಮೂಲಕ ಸಣ್ಣ ಕೈಗಾರಿಕೆಗಳು ಕಚ್ಚಾವಸ್ತುಗಳ ಖರೀದಿ, ಹಂಚಿಕೆದಾರರೊಂದಿಗೆ ಸಂಪರ್ಕ, ಕೌಶಲ್ಯ ಹೊಂದಿದ ಕಾರ್ಮಿಕರೊಂದಿಗೆ ಹೀಗೆ ಹತ್ತು ಹಲವಾರು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ..

Minister Jagdish Shetter
ಜಗದೀಶ್‌ ಶೆಟ್ಟರ್‌

By

Published : Jun 27, 2021, 6:03 PM IST

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಕೈಗಾರಿಕಾ ನೀತಿ 2020-2025ರಲ್ಲಿ ಎಂಎಸ್‌ಎಂಇಗಳಿಗೆ ಹೆಚ್ಚಿನ ಸೌಲಭ್ಯ ಹಾಗೂ ಆದ್ಯತೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. ವಿಶ್ವ ಎಂಎಸ್‌ಎಂಇ ದಿನದ ಅಂಗವಾಗಿ ಬೆಂಗಳೂರು ಬ್ರಾಂಚ್‌ ಆಫ್‌ ಎಸ್‌ಐಆರ್‌ಸಿದ ಇನ್ಸ್‌ಟಿಟ್ಯೂಟ್‌ ಆಫ್‌ ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ, ಎಂಎಸ್‌ಎಂಇ ಮತ್ತು ಸ್ಟಾರ್ಟ್‌ ಅಪ್‌ ಆಫ್‌ ಐಸಿಎಐ ಸಮಿತಿ, ಪೀಣ್ಯ ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ವೆಬಿನಾರ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾರ್ಥಕ್‌ ಯೋಜನೆಯ ಮೂಲಕ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಈ ಬಗ್ಗೆ ಉದ್ಯಮಿಗಳಲ್ಲಿ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ಕೈಗಾರಿಕೆಗಳು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಲೆಕ್ಕಪರಿಶೋಧಕರು ಕೈಗಾರಿಕೆಗಳು ಸಫಲತೆಯಾಗುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದರು. ಕೈಗಾರಿಕೆಗಳ ಅನುಕೂಲ ಹಾಗೂ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ.

ರಾಜ್ಯದಲ್ಲೂ ಎಂಎಸ್‌ಎಂಇಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ನೂತನ ಕೈಗಾರಿಕಾ ನೀತಿಯಲ್ಲಿ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಆದ್ಯತೆಯನ್ನು ನೀಡಲಾಗಿದೆ. ಅಲ್ಲದೆ, ಕ್ರಾಂತಿಕಾರಿ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ಕಾಯ್ದೆ ಹಾಗೂ ಅಫಿಡೆವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ನಂತಹ ಕ್ರಮಗಳು ದೇಶದಲ್ಲೇ ಮೊದಲಾಗಿದ್ದು, ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಇದ್ದಂತಹ ಹಲವಾರು ಅಡೆತಡೆಗಳನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ಸಾರ್ಥಕ್‌ ಆನ್‌ಲೈನ್‌ ಪ್ಲಾಟ್‌ಫಾರಂ ಮುಖಾಂತರ ಸಣ್ಣ ಕೈಗಾರಿಕೆಗಳು ಮತ್ತು ಹಲವಾರು ಪಾಲುದಾರರ ಮಧ್ಯೆ ಸಂಪರ್ಕ ಕೊಂಡಿಯನ್ನು ನಿರ್ಮಿಸಿದ್ದೇವೆ. ಇದರ ಮೂಲಕ ಸಣ್ಣ ಕೈಗಾರಿಕೆಗಳು ಕಚ್ಚಾವಸ್ತುಗಳ ಖರೀದಿ, ಹಂಚಿಕೆದಾರರೊಂದಿಗೆ ಸಂಪರ್ಕ, ಕೌಶಲ್ಯ ಹೊಂದಿದ ಕಾರ್ಮಿಕರೊಂದಿಗೆ ಹೀಗೆ ಹತ್ತು ಹಲವಾರು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.

ಕೈಗಾರಿಕೆಗಳು ಹಾಗೂ ಉದ್ಯಮಿಗಳ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಲೆಕ್ಕಪರಿಶೋಧಕರು ಈ ಎಲ್ಲಾ ಯೋಜನೆಗಳ ಬಗ್ಗೆ ತಮ್ಮ ಸಂಘದ ಅಡಿಯಲ್ಲಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು. ವೆಬಿನಾರ್​ನಲ್ಲಿ ಬೆಂಗಳೂರು ಬ್ರಾಂಚ್‌ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾದ ಬಿ ಟಿ ಶೆಟ್ಟಿ, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷರಾದ ಸಿ ಪ್ರಕಾಶ್‌, ಐಸಿಎಐ ಕಾರ್ಯದರ್ಶಿಗಳಾದ ಪನ್ನರಾಜ್‌, ನಿಕಟಪೂರ್ವ ಅಧ್ಯಕ್ಷರಾದ ರವೀಂದ್ರ ಕೋರೆ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.

ABOUT THE AUTHOR

...view details