ಕರ್ನಾಟಕ

karnataka

ETV Bharat / city

ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ಕಾಣಿಸಿಕೊಂಡ ಸಚಿವ ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಖಾತೆಯ ಸಚಿವ ಕೆ.ಎಸ್. ಈಶ್ವರಪ್ಪ

ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಶ್ರೀರಾಮ ಸೇನಾ ವತಿಯಿಂದ ನಡೆದ ಕಾರ್ಯಕ್ರಮವೊಂದರಲ್ಲಿ ಒಂದೇ ವೇದಿಕೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರೌಡಿಶೀಟರ್ ಯಶಸ್ವಿನಿ ಗೌಡ ಕಾಣಿಸಿಕೊಂಡಿದ್ದಾರೆ.

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರೌಡಿಶೀಟರ್ ಯಶಸ್ವಿನಿ ಗೌಡ

By

Published : Sep 15, 2019, 5:20 PM IST

ಬೆಂಗಳೂರು: ಕುಖ್ಯಾತ ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಖಾತೆಯ ಸಚಿವ ಕೆ.ಎಸ್. ಈಶ್ವರಪ್ಪ ವೇದಿಕೆ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಶ್ರೀರಾಮ ಸೇನಾ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯಪುರದ ರೌಡಿಶೀಟರ್ ಆಗಿರುವ ಯಶಸ್ವಿಗೌಡ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈಶ್ವರಪ್ಪ ಹಿಂದೆ ಯಶಸ್ವಿನಿ ಗೌಡ ನಿಂತಿದ್ದರು. ನಂತರ ಆಕೆಯನ್ನು ಈಶ್ವರಪ್ಪ ಮುಂದೆ ಕರೆದು ಅವರಿಂದ ದೀಪ ಬೆಳಗಿಸಿದ್ದಾರೆ. ಹೀಗಾಗಿ ಈಕೆಯ ಬಗ್ಗೆ ಈಶ್ವರಪ್ಪಗೆ ಗೊತ್ತಿಲ್ಲವೇ ಎಂಬ ಪ್ರಶ್ನೆ ಮೂಡಿದೆ.

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರೌಡಿಶೀಟರ್ ಯಶಸ್ವಿನಿ ಗೌಡ

ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ, ದೇಶಭಕ್ತರು ಎಂದು ಬಂದಿದ್ದೆ, ಆದರೆ ರೌಡಿಶೀಟರ್, ಪೌಡಿಶೀಟರ್ ಗೊತ್ತಿಲ್ಲ. ನಿಮ್ಮಲ್ಲೇ ರೌಡಿಶೀಟರ್ ಇದ್ದರೆ ಯಾರಿಗೆ ಗೊತ್ತು. ನನಗೆ ರೌಡಿಶೀಟರ್ ಬಗ್ಗೆ ಮಾಹಿತಿ ಇರಲಿಲ್ಲ. ಸೌಜನ್ಯವಾಗಿ ಕರೆದಿದ್ದರು, ಹೀಗಾಗಿ ಬಂದು ಹೋಗುತ್ತೀದ್ದೇನೆ ಎಂದು ಗರಂ ಆಗಿಯೇ ಈಶ್ವರಪ್ಪ ಸ್ಪಷ್ಟನೆ ನೀಡಿದರು.

ಈ ಹಿಂದೆಯೇ ಶ್ರೀರಾಮ ಸೇನೆ ಬೆಂಗಳೂರು ಮಹಿಳಾ ಘಟಕ ಅಧ್ಯಕ್ಷ ಸ್ಥಾನಕ್ಕೆ ಯಶಸ್ವಿನಿ ಗೌಡರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಆಕೆಗೂ ಹಾರ, ಶಾಲು ಹಾಕಿ ಸ್ವಾಗತ ಕೋರಲಾಗಿದೆ. ವೇದಿಕೆಯಲ್ಲಿ ಸಚಿವ ಈಶ್ವರಪ್ಪ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ABOUT THE AUTHOR

...view details