ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳನ್ನು ತಡೆಗಟ್ಟುವುದು ಎಲ್ಲರ ಸಾಮೂಹಿಕ ಜವಾಬ್ದಾರಿ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಕೊರೊನಾ ಪ್ರಕರಣಗಳು ಕುರಿತು ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಪ್ರಾರಂಭವಾಗಿದೆ. ನಮ್ಮ ಗಡಿ ಭಾಗದ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿದೆ. ಕೊರೊನಾ ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಜನರು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇನ್ನು ದಿನಕ್ಕೆ 1500 ಕ್ಕೂ ಅಧಿಕ ಕೊರೊನಾ ಕೇಸ್ಗಳು ಕಂಡು ಬಂದರೆ ನೈಟ್ ಕರ್ಫ್ಯೂ ಜಾರಿ ಮಾಡುವಂತೆ ತಜ್ಞರು ಸಲಹೆ ಕೊಟ್ಟಿದ್ದಾರೆ. ಈ ವಿಚಾರದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಕೋವಿಡ್ ಕೇಸ್ಗಳು ಹೆಚ್ಚಾದ್ರೆ ಕಠಿಣ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಈ ಕುರಿತು ಇಂದು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಥಿಯೇಟರ್ ವಿಚಾರವನ್ನೂ ಸಹ ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದರು.
ಆರು ಸಚಿವರು ಕೋರ್ಟ್ಗೆ ಹೋದ ವಿಚಾರದ ಕುರಿತು ಇಂದು ಕಾಂಗ್ರೆಸ್ ಸದಸದಲ್ಲಿ ಚರ್ಚೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಅವರು ಚರ್ಚೆ ಮಾಡಲಿ, ನಾವು ಉತ್ತರ ಕೊಡುತ್ತೇವೆ ನಾವು ಎಂದರು. ಜೊತೆಗೆ ಸಿಬ್ಬಂದಿ ಕಚ್ಚಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಅದೆಲ್ಲಾ ಯಾವ ವಿಚಾರ ಬಿಡಿ ಎಂದು ಹೇಳಿ ಹೊರಟರು.