ಕರ್ನಾಟಕ

karnataka

ETV Bharat / city

ಹಿಜಾಬ್ ಹೆಸರಿನಲ್ಲಿ ಸಮಾಜ ಒಡೆಯುವ ಕುತಂತ್ರ ಸಹಿಸುವುದಿಲ್ಲ: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ - ಬೆಂಗಳೂರಿನಲ್ಲಿ ಕೋಟಾ ರ್ಶರೀನಿವಾಸ ಪೂಜಾರಿ ಹೇಳಿಕೆ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಂtಹ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಿತ್ತು. ಆದರೆ ಮತಗಳ ಮೇಲೆ ಕಣ್ಣಿಟ್ಟು ರಾಜಕೀಯ ಹೇಳಿಕೆ ಕೊಡ್ತಿದ್ದಾರೆ. ಸರ್ಕಾರವನ್ನು ಚುಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದರು.

Minister kota shrinivas poojari on hijab
ಹಿಜಾಬ್ ಹೆಸರಿನಲ್ಲಿ ಸಮಾಜ ಒಡೆಯುವ ಕುತಂತ್ರವನ್ನು ಸಹಿಸುವುದಿಲ್ಲ: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

By

Published : Feb 5, 2022, 1:50 PM IST

ಬೆಂಗಳೂರು:ಹಿಜಾಬ್ ಹೆಸರಿನಲ್ಲಿ ಸಮಾಜ ಒಡೆಯುವ ಕುತಂತ್ರವನ್ನು ಯಾವುದೇ ಕಾರಣಕ್ಕೆ ಸಹಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದೂವರೆ ವರ್ಷದಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಇರಲಿಲ್ಲ. ಶಾಲಾ ಸಮವಸ್ತ್ರ ಧರಿಸಿ ಬರಬೇಕು ಅನ್ನುವ ನಿಯಮವಿದೆ. ‌ಹೊರಗಿನ ಮತಾಂಧ ಶಕ್ತಿಗಳು ಮಾಡುತ್ತಿರುವ ಕುತಂತ್ರವಿದು ಎಂದು ಕಿಡಿಕಾರಿದರು.

ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ವಿವಾದ ವಿಚಾರದಲ್ಲಿ ಮಾತನಾಡಿದ ಸಚಿವರು, ನಮ್ಮಲ್ಲಿ ಸ್ಪಷ್ಟತೆ ಇದೆ. ಯಾವ ಗೊಂದಲವೂ ಇಲ್ಲ. ಶಿಕ್ಷಣ ಸಂಸ್ಥೆಯಲ್ಲಿ ಹಿಜಾಬ್ ಹೆಸರಲ್ಲಿ ಧರ್ಮಾಂಧತೆ ಮಾಡುವುದನ್ನು ವಿರೋಧ ಮಾಡುತ್ತೇವೆ ಎಂದು ಹೇಳಿದರು.

ಕೇಸರಿ ವಿಚಾರದಲ್ಲಿ ಆಗಲಿ, ಹಿಜಾಬ್ ವಿಚಾರದಲ್ಲಿ ಆಗಲಿ ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಗೊಂದಲ ಇರಬಾರದು. ಅದು ಸರಿಯಾ?, ಇದು ಸರಿಯಾ? ಎಂಬುದು ಪ್ರಶ್ನೆಯಲ್ಲ. ಒಂದು ತಪ್ಪಾದರೆ, ಇನ್ನೊಂದೂ ತಪ್ಪಲ್ಲವೇ? ಎಂದು ಪ್ರಶ್ನಿಸಿದ ಸಚಿವರು, ಇಂಥ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಗೊಳಿಸಬೇಕಿತ್ತು. ಆದರೆ ಮತಗಳ ಮೇಲೆ ಕಣ್ಣಿಟ್ಟು ರಾಜಕೀಯ ಹೇಳಿಕೆ ಕೊಡ್ತಿದ್ದಾರೆ. ಸರ್ಕಾರವನ್ನು ಚುಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮನಸ್ಸಲ್ಲೂ ಹಿಜಾಬ್ ಧರಿಸಿ ಶಾಲೆಗೆ ಬರುವುದು ತಪ್ಪು ಎಂಬ ಭಾವನೆ ಇರಬಹುದು. ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಅನ್ನೋ ಕಾರಣಕ್ಕೆ ಇಂಥ ಬೆಳವಣಿಗೆಗಳು ನಡೆದಿವೆ. ಕಾಶ್ಮೀರದಲ್ಲಿಯೂ ಇಂತಹ ಚರ್ಚೆ ಆಗಬೇಕು, ದೇಶದ ಭದ್ರತೆಗೆ ತೊಂದರೆ ಆಗಬೇಕು ಎನ್ನುವ ಹುನ್ನಾರ ಇದರಲ್ಲಿ ಇದೆ ಎಂದು ಹೇಳಿದರು.

ಇದನ್ನೂ ಓದಿ:ಹಿಜಾಬ್ ಹೆಸರಿನಲ್ಲಿ ನಮ್ಮ ಪ್ರದೇಶವನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ: ಕಟೀಲ್​ ಕಿಡಿ

ನಾಯಕರ ತೀರ್ಮಾನಕ್ಕೆ ಬದ್ಧ : ಸಂಪುಟದಿಂದ ಕೆಲವರನ್ನ ಕೈಬಿಡುತ್ತಾರೆಂಬ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ್ ಪೂಜಾರಿ, ಯಾಕೆ ಗೊಂದಲ ಸೃಷ್ಟಿಯಾಗುತ್ತಿದೆಯೋ ಗೊತ್ತಿಲ್ಲ. ನಾನು ಪಕ್ಷದ ಪರ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. ಪಕ್ಷದ ನಾಯಕರು ಯಾವುದೇ ತೀರ್ಮಾನ ತೆಗೆದುಕೊಂಡರೂ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಓಬವ್ವ ಆತ್ಮರಕ್ಷಣೆ ಕಲೆಗೆ ನಾಳೆ ಚಾಲನೆ :ಓಬವ್ವ ಆತ್ಮರಕ್ಷಣೆ ಕಲೆಯನ್ನು ಮೆಟ್ರಿಕ್ ನಂತರದ ವಿದ್ಯಾರ್ಥಿನಿಗಳಿಗೋಸ್ಕರ ಪ್ರಕಟಿಸಿದ್ದೇವೆ. ಮೆಟ್ರಿಕ್ ನಂತರದ ಹಿಂದುಳಿದ ವರ್ಗದಲ್ಲಿ 629 ಹಾಸ್ಟೆಲ್​ಗಳಿವೆ. ಸಮಾಜ ಕಲ್ಯಾಣ ಇಲಾಖೆಯ 257 ಹಾಸ್ಟೆಲ್, 818 ಕ್ರಿಶ್ಚಿಯನ್ ಸಮುದಾಯದ ಹಾಸ್ಟೆಲ್​ಗಳಿವೆ. ಒಟ್ಟು 1.82 ಲಕ್ಷ ವಿದ್ಯಾರ್ಥಿನಿಯರು ಓಬವ್ವ ಕಾರ್ಯಕ್ರಮದ ಅಡಿ ಬರುತ್ತಾರೆ. ನಾಳೆ ಬೆಳಗ್ಗೆ ಮುಖ್ಯಮಂತ್ರಿಗಳು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಜಿಲ್ಲಾ ಮಟ್ಟದಲ್ಲೂ ಕೂಡ ಉದ್ಘಾಟನೆ ಆಗುತ್ತದೆ ಎಂದು ತಿಳಿಸಿದರು.

ABOUT THE AUTHOR

...view details