ಕರ್ನಾಟಕ

karnataka

ETV Bharat / city

ಖಾತೆ ಹಂಚಿಕೆ ಬಗ್ಗೆ ನನಗೆ ಅಸಮಾಧಾನವಿದೆ ; ಮುಂದಿನ 2-3 ದಿನಗಳಲ್ಲಿ ನಿರ್ಧಾರ ತಿಳಿಸುವೆ - ಸಚಿವ ಎಂಟಿಬಿ ಟ್ವೀಟ್‌ - ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಎಂಟಿಬಿ ನಾಗರಾಜ್‌ ಅವರ ಹೇಳಿಕೆ ಭಾರಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂಟಿಬಿ ನಾಗರಾಜ್‌ಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಖಾತೆ ನೀಡಿದ್ದರು..

minister mtb nagaraj says i dont get the ministry i want will make a decision in 2 to 3 days
ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ; ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಸಚಿವ ಎಂಟಿಬಿ ಟ್ವೀಟ್‌

By

Published : Aug 7, 2021, 5:32 PM IST

ಬೆಂಗಳೂರು :ಖಾತೆ ಹಂಚಿಕೆ ವಿಚಾರದಲ್ಲಿ ವಿಧಾನ ಪರಿಷತ್‌ ಸದಸ್ಯ ಹಾಗೂ ನೂತನ ಸಚಿವ ಎಂಟಿಬಿ ನಾಗರಾಜ್‌ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಟ್ವೀಟ್‌ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಎಂಟಿಬಿ ನಾಗರಾಜ್‌ ಅವರ ಹೇಳಿಕೆ ಭಾರಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂಟಿಬಿ ನಾಗರಾಜ್‌ಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಖಾತೆ ನೀಡಿದ್ದರು. ಆದರೆ, ಈ ಖಾತೆ ನೀಡಿರುವುದು ತಮಗೆ ಸಮಾಧಾನ ತಂದಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಸಮಾಧಾನಿತ ಸಚಿವರನ್ನು ಕರೆದು ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ

ABOUT THE AUTHOR

...view details