ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿ ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ: ಡಾ.ಕೆ.ಸುಧಾಕರ್ - Covid 2nd wave

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲೇ 6 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ಹರಡುವ ಬಗ್ಗೆ ತಜ್ಞರು ಹೇಳಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Minister of Health Dr. K. Sudhakar
ಆರೋಗ್ಯ ಸಚಿವ ಡಾ.ಕೆ.ಸುಧಾಕರ್

By

Published : Apr 5, 2021, 12:56 PM IST

ಬೆಂಗಳೂರು:ರಾಜ್ಯದಲ್ಲಿ ಇನ್ನೆರಡು ತಿಂಗಳು ಕೋವಿಡ್​​ನ ಅಟ್ಟಹಾಸ ಜೋರಾಗಿರಲಿದೆ. ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದ್ದು, ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಸಚಿವ ಡಾ.ಕೆ.ಸುಧಾಕರ್

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಸೂಚಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಏನ್ ಮಾಡಿದ್ದಾರೆ ಅಂತ ನೋಡಿದ್ದೇವೆ. ಹೀಗಾಗಿ, ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.

ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್​ನಲ್ಲಿ ಬೆಡ್​​ಗಳನ್ನು ಹೆಚ್ಚು ಮಾಡಬೇಕು. ಇನ್ನು ಬೆಡ್​​ಗಳು ಪೂರ್ಣವಾಗಿಲ್ಲ, ಖಾಸಗಿ ಆಸ್ಪತ್ರೆಯೊಂದಿಗೂ ಶೇ. 20ರಷ್ಟು ಮೀಸಲಿಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಚಿತ್ರಮಂದಿರಗಳಿಗೆ ಶೇ.100ರಷ್ಟು ಪ್ರೇಕ್ಷಕರಿಗೆ ಮುಖ್ಯಮಂತ್ರಿಗಳು ಅವಕಾಶ ನೀಡಿದ್ದಾರೆ. ಸಿನಿಮಾ ಟಿಕೆಟ್ ಅಡ್ವಾನ್ಸ್ ಬುಕ್ ಆಗಿರುವ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಮಾನವೀಯ ದೃಷ್ಟಿಯಿಂದ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಸಿನಿಮಾದವರು ಸಹ ಸಹಕಾರ ಕೇಳಿದ್ದು, ಮುಖ್ಯಮಂತ್ರಿಗಳಿಗೂ ಸಾಕಷ್ಟು ಒತ್ತಡಗಳಿರುತ್ತವೆ. ಜನರು ಸಹಕಾರ ನೀಡಬೇಕು. ಕೋವಿಡ್ ಹೆಚ್ಚಾದಾಗ ಸರ್ಕಾರಕ್ಕೆ ಬೇರೆ ದಾರಿ ಇರೋದಿಲ್ಲ. ಹಂತ-ಹಂತವಾಗಿ ಒಂದೊಂದು ಚಟುವಟಿಕೆ ನಿಲ್ಲಿಸಬೇಕಾಗುತ್ತದೆ ಎಂದರು.

ರಮೇಶ್ ಜಾರಕಿಹೊಳಿ ಪ್ರಕರಣ ಏನಾಗಿದೆಗಮನಿಸಿಲ್ಲ:

ನಾನು ಜನರ ಆರೋಗ್ಯ, ನನ್ನ ಕಾರ್ಯದಲ್ಲಿ ಬ್ಯುಸಿ ಇದ್ದೇನೆ. ಕೋವಿಡ್ ಕಂಟ್ರೋಲ್​ಗೆ ಶ್ರಮ ವಹಿಸುತ್ತಿದ್ದೇನೆ. ಅದಕ್ಕೆ ಸಮಯ ಸಿಗುತ್ತಿಲ್ಲ. ರಮೇಶ್ ಜಾರಕಿಹೊಳಿ ಪ್ರಕರಣ ಏನಾಗಿದೆ ಗಮನಿಸಿಲ್ಲ ಎಂದರು.

ಇದನ್ನೂ ಓದಿ:ಡಿನೋಟಿಫಿಕೇಷನ್: ಸಿಎಂ ಬಿಎಸ್​ವೈಗೆ ರಿಲೀಫ್​ ನೀಡಿದ ಸುಪ್ರೀಂಕೋರ್ಟ್​

ABOUT THE AUTHOR

...view details