ಕರ್ನಾಟಕ

karnataka

ETV Bharat / city

ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ: ಪ್ರಭು ಚವ್ಹಾಣ ಹರ್ಷ

ದೀಪಾವಳಿ ಹಬ್ಬದೊಂದು ದೇವಾಲಯಗಳಲ್ಲಿ ಗೋಪೂಜೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಇದಕ್ಕೆ ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದಾರೆ.

Minister prabhu chuhan
Minister prabhu chuhan

By

Published : Oct 27, 2021, 11:48 PM IST

ಬೆಂಗಳೂರು: ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಿರುವುದಕ್ಕೆ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಹಿಂದೂ ಧರ್ಮದಲ್ಲಿ ಗೋವು(ಹಸು)ಗಳಿಗೆ ತಾಯಿಯ ಸ್ಥಾನವನ್ನು ನೀಡಿದ್ದು, ಗೋಮಾತೆ, ದೇವತೆ ಎಂದು ಭಾವಿಸಿ ಪೂಜಿಸಲಾಗುತ್ತದೆ. ಪುರಾಣ, ಉಪನಿಷತ್ತುಗಳಲ್ಲಿ ಗೋವುಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಧರ್ಮಗ್ರಂಥಗಳಲ್ಲಿ ಗೋವಿಗೆ ಮಾತೆಯ ಸ್ಥಾನ ನೀಡಲಾಗಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆ ವಾಸ್ತುದೋಷಕ್ಕೂ ಪರಿಹಾರ ದೊರೆಯುವುದೆಂಬ ನಂಬಿಕೆ ನಮ್ಮ ಸಮಾಜದಲ್ಲಿದೆ. ಇಂದಿನ ದಿನಗಳಲ್ಲಿ ಪಟ್ಟಣ, ಮಹಾನಗರಗಳಲ್ಲಿ ವಾಸಿಸುವ ಜನರು ಗೋಪೂಜೆಯನ್ನು ಮರೆತು ಬಿಡುತ್ತಿದ್ದಾರೆ.

ಇದನ್ನೂ ಓದಿರಿ:ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ಬೆಲೆ : ದುಬಾರಿ ದುನಿಯಾದಲ್ಲಿ ಗ್ರಾಹಕರು-ಮಾರಾಟಗಾರರು ತತ್ತರ

ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವರೆಂದು ತಿಳಿದು ಪೂಜಿಸುವ ಸಂಪ್ರದಾಯ/ಪದ್ಧತಿ ಬಿಡಬಾರದೆಂಬ ಉದ್ದೇಶದಿಂದ ಹೊರಡಿಸಿರುವ ಈ ಆದೇಶದಿಂದ ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಿ ಸಂಪ್ರದಾಯವನ್ನು ಮುಂದುವರೆಸುವುದು, ಗೋವುಗಳ ಮಹತ್ವ ಹಾಗೂ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ.

ಗೋವುಗಳ ಹಿತದೃಷ್ಟಿಯಿಂದ ಉತ್ತಮ ನಿರ್ಧಾರ ಕೈಗೊಂಡ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ದೀಪಾವಳಿ ಬಲಿಪಾಡ್ಯಮಿ ದಿನದಂದು ನಾನೂ ಕೂಡ ಗೋಪೂಜೆ ನಡೆಸಲಿದ್ದು, ಆದೇಶದಂತೆ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯ/ಸಂಸ್ಥೆಗಳಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ, ಬಾಳೆಹಣ್ಣು ಮುಂತಾದ ಗೋಗ್ರಾಸವನ್ನು ಹಸುವಿಗೆ ತಿನ್ನಿಸಿ ಧೂಪ, ದೀಪಗಳಿಂದ ಗೋಪೂಜೆ ನೆರವೇರಿಸಬೇಕೆಂದು ತಿಳಿಸಿದ್ದಾರೆ.

ABOUT THE AUTHOR

...view details