ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು. ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ ಎಂದಿದ್ದಾರೆ.