ಬೆಂಗಳೂರು:ಕೋವಿಡ್ ಮೂರನೇ ಅಲೆ ಇದೀಗ ವಿಧಾನಸೌಧಕ್ಕೆ ಕಾಲಿಟ್ಟಿದೆ. ಕಂದಾಯ ಸಚಿವ ಆರ್.ಅಶೋಕ್‌ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಲಘು ರೋಗಲಕ್ಷಣಗಳ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಚಿವರು ವೈದ್ಯಕೀಯ ಪರೀಕ್ಷೆಗೊಳಪಟ್ಟಿದ್ದಾರೆ.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದ್ದ ಕೋವಿಡ್ ಸಭೆಯಲ್ಲಿ ಭಾಗವಹಿಸಿದ್ದ ಕಂದಾಯ ಸಚಿವ ಅಶೋಕ್‌ಗೆ ಇದೀಗ ಕೊರೊನಾ ಸೋಂಕು ತಗುಲಿದೆ. ಅಶೋಕ್ ಅವರು ಸಂಪೂರ್ಣ ಆರೋಗ್ಯ ತಪಾಸಣೆಗೊಳಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೋಂ ಐಸೋಲೇಷನ್ ಕುರಿತು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.