ಕರ್ನಾಟಕ

karnataka

ETV Bharat / city

ತಮ್ಮ ವಿರುದ್ಧದ ವರದಿಗೆ ತಡೆ ಕೋರಿ ಕೋರ್ಟ್ ಮೊರೆ ಹೋದ ಸಚಿವರು: ಇಂದು ಅರ್ಜಿ ವಿಚಾರಣೆ - Health Minister Sudhakar

ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ಹೇರಬೇಕು ಎಂದು ಕೋರಿ ಬೆಂಗಳೂರಿನ 27ನೇ ಸಿಸಿಎಚ್ ನ್ಯಾಯಾಲಯದಲ್ಲಿ 6 ಮಂದಿ ಸಚಿವರು ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ. ಈ ಕುರಿತಂತೆ ಸಚಿವ ಕೆ. ಸುಧಾಕರ್ ಸರಣಿ ಟ್ವೀಟ್​ ಮಾಡಿದ್ದಾರೆ.

ಸಿಸಿಎಚ್ ನ್ಯಾಯಾಲಯ
ಸಿಸಿಎಚ್ ನ್ಯಾಯಾಲಯ

By

Published : Mar 6, 2021, 7:27 AM IST

Updated : Mar 6, 2021, 7:56 AM IST

ಬೆಂಗಳೂರು: ಸಚಿವರಾದ ಶಿವರಾಮ ಹೆಬ್ಬಾರ್, ಬಿ.ಸಿ.ಪಾಟೀಲ್, ಭೈರತಿ ಬಸವರಾಜು, ಕೆ. ಸುಧಾಕರ್, ಎಸ್​.ಟಿ ಸೋಮಶೇಖರ್ ಹಾಗು ನಾರಾಯಣ ಗೌಡ ಅವರು ತಮ್ಮ ವಿರುದ್ಧ ಮಾಧ್ಯಮಗಳು ಯಾವುದೇ ವರದಿ ಬಿತ್ತರಿಸಬಾರದು ಎಂದು ಕೋರಿ ನಗರದ 27ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಷಯಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಯಲಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದ ಆರು ಮಂದಿ ಸಚಿವರು ಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಬೇಕು ಎಂದು ಕೋರಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಕೆ. ಸುಧಾಕರ್ ಸರಣಿ ಟ್ವೀಟ್​ ಮಾಡಿದ್ದು, ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ. ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ ಎಂದಿದ್ದಾರೆ.

ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ, ತೇಜೋವಧೆ ಮಾಡುವ ಮತ್ತು ರಾಜಕೀಯ ಷಡ್ಯಂತ್ರ ನಡೆಸುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮಾಧ್ಯಮಗಳು ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ 6 ಸಚಿವರು!

Last Updated : Mar 6, 2021, 7:56 AM IST

ABOUT THE AUTHOR

...view details