ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೆಲ್ಫ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಸೆಲ್ಫ್ ಕ್ವಾರಂಟೈನ್ಗೆ ಒಳಗಾದ ಸುಧಾಕರ್..ಐವರಲ್ಲಿ ನಾಲ್ವರು ಸಚಿವರು ಸ್ವಯಂ ದಿಗ್ಬಂಧನ ಅವರು ಕೋವಿಡ್-19 ತಪಾಸಣೆ ಮಾಡಿಸಿಕೊಂಡಿದ್ದು, ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ. ಆದರೂ ಮುಂದಿನ ಏಳು ದಿನ ಹೋಂ ಕ್ವಾರಂಟೈನ್ನಲ್ಲಿರಲು ನಿರ್ಧರಿಸಿದ್ದು, ನನ್ನ ಎಲ್ಲಾ ಕೆಲಸವನ್ನ ಮನೆಯಿಂದಲೇ ನಿರ್ವಹಣೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಟಿ ರವಿ ಕಳೆದ ರಾತ್ರಿಯೇ ಟ್ವೀಟ್ ಮೂಲಕ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಆದರೂ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಸಂಪರ್ಕಿತ ಸಚಿವರು ನಾಲ್ವರಲ್ಲ ಐವರು: ಇನ್ನು ಕೊರೊನಾ ಸೋಂಕಿತ 475 ನೇ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವ ಸಚಿವರ ಸಂಖ್ಯೆ ನಾಲ್ಕರಿಂದ ಐದಕ್ಕೇರಿದೆ. ವಿಡಿಯೋ ಜರ್ನಲಿಸ್ಟ್ ಆಗಿದ್ದ ಸೋಂಕಿತ ವ್ಯಕ್ತಿಯು ವಸತಿ ಸಚಿವ ವಿ.ಸೋಮಣ್ಣ ಅವರಿಂದ ಬೈಟ್ ಪಡೆದು ವರದಿ ಮಾಡಿದ್ದರು. ಹಾಗಾಗಿ ಡಾ.ಅಶ್ವತ್ಥನಾರಾಯಣ್, ಬಸವರಾಜ ಬೊಮ್ಮಾಯಿ, ಸಿ.ಟಿ ರವಿ, ಡಾ.ಸುಧಾಕರ್ ಜೊತೆ ಸೋಮಣ್ಣ ಕೂಡ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ.
ಸೋಮಣ್ಣ ನಡೆ ನಿಗೂಢ: ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತ ವಸತಿ ಸಚಿವ ವಿ.ಸೋಮಣ್ಣ ಕೂಡ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯ ನಿರೀಕ್ಷೆಯಲ್ಲಿದ್ದಾರೆ. ಆದರೆ ಹೋಂ ಕ್ವಾರಂಟೈನ್ಗೆ ಒಳಗಾಗಿರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೇ ನಿನ್ನೆ ಮುಖ್ಯಮಂತ್ರಿಗಳ ಸಭೆಯಲ್ಲಿ ಕೂಡ ಪಾಲ್ಗೊಂಡಿದ್ದು, ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.