ಕರ್ನಾಟಕ

karnataka

ETV Bharat / city

ಕರ್ನಾಟಕಕ್ಕೆ ಏಮ್ಸ್, ಕಲ್ಯಾಣ ಕರ್ನಾಟಕಕ್ಕೆ ನಿಮ್ಹಾನ್ಸ್ ಪ್ರಾದೇಶಿಕ ಕೇಂದ್ರ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವಿ - ಕಲ್ಯಾಣ ಕರ್ನಾಟಕಕ್ಕೆ ನಿಮ್ಹಾನ್ಸ್ ಪ್ರಾದೇಶಿಕ ಕೇಂದ್ರ

ಬೆಂಗಳೂರಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್, ಹಲವು ವಿಷಯಗಳ ಕುರಿತು ಚರ್ಚಿಸಿದರು.

Sudhakar meets nirmala sitaraman
Sudhakar meets nirmala sitaraman

By

Published : Feb 21, 2021, 12:41 AM IST


ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭೇಟಿಯಾಗಿ ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ತರಲು ಮತ್ತು ಕಲ್ಯಾಣ ಕರ್ನಾಟಕದಲ್ಲಿ ನಿಮ್ಹಾನ್ಸ್​​ನ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ನೆರವು ಕೋರಿದರು.

ಕೇಂದ್ರ ಸಚಿವರನ್ನು ಶನಿವಾರ ಬೆಂಗಳೂರಲ್ಲಿ ಭೇಟಿಯಾಗಿ ಆರೋಗ್ಯ ಕೇಂದ್ರಿತ ಬಜೆಟ್ ಮಂಡಿಸಿದ್ದಕ್ಕಾಗಿ ಸುಧಾಕರ್ ಅಭಿನಂದನೆ ಸಲ್ಲಿಸಿದರು. ರಸ್ತೆ ಅಪಘಾತಗಳಿಂದ ಉಂಟಾಗುವ ಪ್ರಾಣ ಹಾನಿ ತಗ್ಗಿಸಲು ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಂತೆ 4 ಕಡೆ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್​ಗಳನ್ನು ಸ್ಥಾಪಿಸುವ ಹಾಗೂ ಕ್ಯಾನ್ಸರ್, ಕಿಡ್ನಿ, ಹೃದ್ರೋಗಳಿಗೆ ಚಿಕಿತ್ಸೆ ಒದಗಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನೊಳಗೊಂಡ ಹೆಲ್ತ್ ಸಿಟಿ ನಿರ್ಮಿಸುವ ಕುರಿತಂತೆ ಚರ್ಚಿಸಲಾಯಿತು.

ಮಳೆಯಾಶ್ರಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಹಾಗೂ ಕೋಚಿಮುಲ್ ಮತ್ತು ಡಿಸಿಸಿ ಬ್ಯಾಂಕ್ ವಿಭಜನೆ ಮಾಡಲು ಕೇಂದ್ರ ಸರ್ಕಾರದ ಸಹಕಾರವನ್ನು ರಾಜ್ಯ ಸಚಿವರು ಕೋರಿದರು.

ABOUT THE AUTHOR

...view details