ಕರ್ನಾಟಕ

karnataka

ETV Bharat / city

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ: ಸಚಿವ ಸುನಿಲ್ ಕುಮಾರ್ - ಕಾಂಗ್ರೆಸ್​ ವಿರುದ್ಧ ಸಚಿವ ಸುನಿಲ್ ಕುಮಾರ್ ಹೇಳಿಕೆ

ಹಿಜಾಬ್​​, ಕೇಸರಿ ಶಾಲು ವಿವಾದ ಜೋರಾಗಿದೆ. ಇದೀಗ ರಾಜ್ಯವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ ಎಂದು ಸಚಿವ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

minister sunil kumar
ಸಚಿವ ಸುನಿಲ್ ಕುಮಾರ್

By

Published : Feb 9, 2022, 1:22 PM IST

ಬೆಂಗಳೂರು: ದಿನೇ ದಿನೆ ಹಿಜಾಬ್​​, ಕೇಸರಿ ಶಾಲು ಗಲಾಟೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆರೋಪ, ಪ್ರತ್ಯಾರೋಪಗಳು ಹೆಚ್ಚುತ್ತಿವೆ. ಇದೀಗ ಕರ್ನಾಟಕವನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಏನು ಮಾಡುವುದಕ್ಕೆ ಹೊರಟಿದ್ದೀರಿ ಎಂದು ಸಚಿವ ವಿ.ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧಿಸುತ್ತಾರೆ ಎಂದು ಆರೋಪಿಸಿದರು. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ. ರಾಷ್ಟ್ರಧ್ವಜ ಇಳಿಸಿದರೆಂಬ ಸುಳ್ಳನ್ನು ಸಹ ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಜಾಬ್​, ಕೇಸರಿ ಶಾಲು ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ನಾವು ನಮ್ಮ ನೆಲದ ಕಾನೂನು ಗೌರವಿಸುತ್ತೇವೆ. ಈ ಸಂಬಂಧ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ಕೆಲಸ ಆಗಬೇಕು. ಕಾಂಗ್ರೆಸ್ ದ್ವೇಷವನ್ನು ಉಂಟು ಮಾಡುವ ಕೆಲಸ ಮಾಡುತ್ತಿದೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತದೆ. ಯಾರು ಪ್ರತ್ಯೇಕವಾಗಿ ಇರಬೇಕು ಅಂತ ಬಯಸುತ್ತಿದ್ದಾರೋ ಅವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಿಕೊಂಡೇ ಬರಬೇಕು ಎಂದರು.

ಇದನ್ನೂ ಓದಿ:'ಅವರು ಜೈಶ್ರೀರಾಮ್‌ ಎಂದು ಕೂಗಿದ್ರು, ನಾನು ಅಲ್ಲಾಹು ಅಕ್ಬರ್‌ ಎಂದು ಕೂಗಿದೆ, ಅವರದ್ದೂ ತಪ್ಪಿಲ್ಲ, ನನ್ನದೂ ತಪ್ಪಿಲ್ಲ'

ಕಾಲೇಜಿನಲ್ಲಿ ಈ ರೀತಿಯ ಭಾವನೆ ಸೃಷ್ಟಿಯಾಗಿರುವುದಕ್ಕೆ ಯಾರು ಕಾರಣ? ಪ್ರತ್ಯೇಕವಾದವನ್ನು ಕೇಳುವವರನ್ನು ಯಾರು ಬೆಂಬಲಿಸುತ್ತಿದ್ದಾರೆ? ಇದೊಂದು ವ್ಯವಸ್ಥಿತವಾದ ಪಿತೂರಿ. ಸರ್ಕಾರಿ ಶಾಲೆಗೆ ಫೀಸ್ ಕಟ್ಟೋದಕ್ಕೆ ಆಗದವರಿಗೆ ಕೋರ್ಟ್ ಮೆಟ್ಟಿಲು ಹತ್ತುವುದಕ್ಕೆ ಯಾರು ಬೆಂಬಲ ಕೊಟ್ಟರು. ಎಸ್ ಡಿ ಪಿ ಐ ಒಂದು ರಾಜಕೀಯ ಪಾರ್ಟಿ, ಅದನ್ನು ಬ್ಯಾನ್ ಮಾಡುವುದಕ್ಕೆ ಏನೇನು ಪ್ರಕ್ರಿಯೆ ಇದೆ ಎಂಬುದು ನಿಮಗೆ ಗೊತ್ತಿದೆ. ಆದ್ರೆ ಮಂಗಳೂರಲ್ಲಿ ಪಿಎಫ್ಐ, ಎಸ್​ಡಿಪಿಐ ಜೊತೆ ಒಳ ಒಪ್ಪಂದ ಮಾಡಿಕೊಂಡವರು ಕಾಂಗ್ರೆಸ್​ನವರೇ ಎಂದು ಆರೋಪಿಸಿದರು.

ABOUT THE AUTHOR

...view details