ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಚಿಂತನೆ ಇಲ್ಲ. ಈ ಸಂಬಂಧ ವದಂತಿಯನ್ನು ರೈತರು ನಂಬ ಬಾರದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಕಚೇರಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸೌರ ವಿದ್ಯುತ್ ಯೋಜನೆಗಳಲ್ಲಿ ಈ ಹಿಂದಿನ ಹಗರಣ ತನಿಖೆ ನಡೆಸಬೇಕೆಂಬ ಈ ಮುಂಚೆ ನಾನು ಮಾಡಿದ್ದ ಒತ್ತಾಯಕ್ಕೆ ಈಗಲೂ ಬದ್ಧನಾಗಿದ್ದೇನೆ. ಇಲಾಖೆಯಲ್ಲಿ ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಪಡಿಸಿ, ಸುಧಾರಣೆ ತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆಯುತ್ತೇನೆ. ಲೋಪದೋಷಗಳೇನಾದರು ಆಗಿದ್ದರೆ ತನಿಖೆ ಸಿದ್ಧನಿದ್ದೇನೆ ಎಂದರು.
ರೈತರ ಪಂಪ್ ಸೆಟ್‌ಗೆ ಮೀಟರ್ ಅಳವಡಿಸುವುದಿಲ್ಲ, ಇದು ವದಂತಿಯಷ್ಟೇ: ಸಚಿವ ಸುನಿಲ್ ಕುಮಾರ್
ರೈತರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸುವುದಿಲ್ಲ. ಇದು ಕೇವಲ ವಂದತಿಷ್ಟೇ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.
ರೈತರ ಪಂಪ್ ಸೆಟ್‌ಗೆ ಮೀಟರ್ ಅಳವಡಿಸುವುದಿಲ್ಲ, ಇದು ವದಂತಿಯಷ್ಟೇ: ಸಚಿವ ಸುನಿಲ್ ಕುಮಾರ್
ರೈತರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸುವ ಯಾವುದೇ ಚಿಂತನೆ ಇಲ್ಲ. ಈ ಸಂಬಂಧ ಇರುವ ಊಹಾಪೋಹಗಳಿಗೆ ರೈತರು ಕಿವಿಗೊಡಬಾರದು ಎಂದು ಹೇಳಿದ್ದಾರೆ. ಇಲಾಖೆಯನ್ನು ಜನ ಸ್ನೇಹಿಯಾಗಿಸುವುದು ನಮ್ಮ ಮುಂದಿರುವ ಸವಾಲಾಗಿದೆ. ರೈತರಿಗೆ ನಿರಂತರ ವಿದ್ಯುತ್ ಪೂರೈಸಲು ಎಲ್ಲಾ ಯತ್ನ ಮಾಡಲಾಗುವುದು. ಇಲಾಖೆಯಲ್ಲಿನ ಎಲ್ಲಾ ಹಂತಗಳಲ್ಲಿ ಸುಧಾರಣೆ ತಂದು, ಇಲಾಖೆಯನ್ನು ಕ್ರಿಯಾಶೀಲಗೊಳಿಸಲಾಗುವುದು ಎಂದು ತಿಳಿಸಿದರು.