ಕರ್ನಾಟಕ

karnataka

ETV Bharat / city

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಕರಡು ಕಾರ್ಯಸೂಚಿ ಕುರಿತು ಸಚಿವ ಸುರೇಶ್ ಕುಮಾರ್ ಸಭೆ - ಕರಡು ಕಾರ್ಯಸೂಚಿ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಲು ತಯಾರಿಸಿರುವ ಕರಡು ಕಾರ್ಯಸೂಚಿಯ ಬಗ್ಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು.

minister-suresh-kumar-meeting
ಕರಡು ಕಾರ್ಯಸೂಚಿ ಕುರಿತು ಸಚಿವ ಸುರೇಶ್ ಕುಮಾರ್ ಸಭೆ

By

Published : Nov 6, 2020, 3:23 AM IST

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲು ಪ್ರಾಥಮಿಕ-ಪ್ರೌಢ ಶಿಕ್ಷಣ ಕ್ಷೇತ್ರದ ಕುರಿತು ತಯಾರಿಸಿರುವ ಕರಡು ಕಾರ್ಯಸೂಚಿಯ ಬಗ್ಗೆ ವೆಬಿನಾರ್ ಮೂಲಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ಸಭೆ ನಡೆಸಿದರು.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಸಮಗ್ರ ಶಿಕ್ಷಣ ಯೋಜನಾ ನಿರ್ದೇಶಕಿ ದೀಪಾ, ಶಿಕ್ಷಣ ಇಲಾಖೆಯ ಆಯುಕ್ತ ಅನ್ಬು ಕುಮಾರ್, ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕ ಕೃಷ್ಣಾಜಿ ಕರಿಚನ್ನಣ್ಣನವರ್, ಸಮಗ್ರ ಶಿಕ್ಷಣದ ಗೋಪಾಲಕೃಷ್ಣ ಹಾಗೂ ಕಾರ್ಯಪಡೆಯ ಸದಸ್ಯರಾದ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ, ಅಜೀಂ ಪ್ರೇಂಜಿ ವಿಶ್ವವಿದ್ಯಾಲಯದ ಹೃಷಿಕೇಶ್ ವೆಬಿನಾರ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಕರಡು ಕಾರ್ಯಸೂಚಿ ಕುರಿತು ಸಚಿವ ಸುರೇಶ್ ಕುಮಾರ್ ಸಭೆ
ಶನಿವಾರ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಉನ್ನತ-ಪ್ರಾಥಮಿಕ-ಪ್ರೌಢ ಶಿಕ್ಷಣದ ಕಾರ್ಯಪಡೆ ತನ್ನ ಅಂತಿಮ ವರದಿಯನ್ನು ಸಲ್ಲಿಸಲಿದೆ. ಹಾಗಾಗಿ ಪೂರ್ವಭಾವಿಯಾಗಿ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿ ಸಮಾಲೋಚನೆ ನಡೆಸಿದರು.

ABOUT THE AUTHOR

...view details