ಬೆಂಗಳೂರು:ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ದ್ವಿತೀಯ ಪಿಯು, ಎಸ್ಎಸ್ಎಲ್ಸಿ ಪರೀಕ್ಷೆಗೆ ಮುಹೂರ್ತ ನಿಗದಿ
19:07 January 06
ದ್ವಿತೀಯ ಪಿಯು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗೆ ಮುಹೂರ್ತ ನಿಗದಿ
ಇದನ್ನೂ ಓದಿ:ಸಿಎಂ ತೀರ್ಮಾನಕ್ಕೆ ನಾನು ಬದ್ಧ: ಸಚಿವ ಬಿ.ಸಿ.ಪಾಟೀಲ್
ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲಾ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.
'ಒಂದರಿಂದ ಒಂಭತ್ತನೇ ತರಗತಿಗಳ ಪಠ್ಯ ಕಡಿತವಿಲ್ಲ'
ಒಂದರಿಂದ ಒಂಭತ್ತನೇ ತರಗತಿಗಳ ಪಠ್ಯ ಕಡಿತವಿಲ್ಲವೆಂದು ತಿಳಿಸಿರುವ ಸಚಿವರು ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.