ಕರ್ನಾಟಕ

karnataka

ETV Bharat / city

CBSE ಪರೀಕ್ಷೆ ರದ್ದು, ಶೀಘ್ರವೇ ರಾಜ್ಯದಲ್ಲೂ ಸೂಕ್ತ ತೀರ್ಮಾನ: ಸಚಿವ ಸುರೇಶ್ ಕುಮಾರ್ - ರಾಜ್ಯದಲ್ಲೂ ದ್ವಿತೀಯ ಪಿಯು ಪರೀಕ್ಷೆ

ರಾಜ್ಯದಲ್ಲೂ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಾ ಇಲ್ವಾ ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಈ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

minister-suresh-kumar-talk-
ಸಚಿವ ಸುರೇಶ್ ಕುಮಾರ್

By

Published : Jun 1, 2021, 8:51 PM IST

ಬೆಂಗಳೂರು: ಕೊರೊನಾ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತಂತೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಓದಿ: ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು..

ರಾಜ್ಯದಲ್ಲೂ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಾ ಇಲ್ವಾ ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಈ ಕುರಿತಂತೆ ಮಾಧ್ಯಮಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿದೆ. ಈ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ABOUT THE AUTHOR

...view details