ಬೆಂಗಳೂರು:ಸಂಚಾರ ದಟ್ಟಣೆ ತಡೆಯುವ ಸಲುವಾಗಿ ಬೆಂಗಳೂರಿನ ಹೊರ ಭಾಗದ ನಾಲ್ಕು ಕಡೆ ಉಪನಗರ ರೈಲ್ವೆ ಯೋಜನೆ ಕೈಗೆತ್ತಿಕೊಂಡಿದ್ದು, ಮಾರ್ಚ್ ಅಂತ್ಯದೊಳಗೆ ಒಂದು ಕಾಮಗಾರಿ ಪೂರ್ಣಗೊಳ್ಳಲಿದೆ. ನಮ್ಮ ಸರ್ಕಾರದ ಅವಧಿಯಲ್ಲೇ ಯೋಜನೆ ಮುಕ್ತಾಯವಾಗಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಪರವಾಗಿ ಯು.ಬಿ. ವೆಂಕಟೇಶ್ ಅವರು ಬೆಂಗಳೂರು ನಗರದ ಉಪನಗರ ರೈಲು ಯೋಜನೆ ಜಾರಿ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 148.17 ಕಿಮೀ ಉದ್ದದ ರೈಲ್ವೆ ಜಾಲವನ್ನು ಕೇಂದ್ರದ ಸಹಭಾಗಿತ್ವದಲ್ಲಿ ಕಾರ್ಯಗತಗೊಳಿಸಲಾಗಿದೆ. ನಾಲ್ಕು ಕಾರಿಡಾರ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದರು.
ಬೆಂಗಳೂರಿನಿಂದ ದೇವನಹಳ್ಳಿಯವರೆಗೆ 41.40 ಕಿ.ಮೀ., ಬೈಯಪ್ಪನಹಳ್ಳಿಯಿಂದ 25.01 ಕಿಮೀ, ಕೆಂಗೇರಿಯಿಂದ ವೈಟ್ ಫೀಲ್ಡ್ 35.52 ಕಿಮೀ, ಹೀಲಲಿಯಿಂದ ರಾಜಾನುಕುಂಟೆಯರವೆಗೂ 46.24 ಕಿ.ಮೀ ಯೋಜನೆ ಇದೆ. ಇದರಲ್ಲಿ ಮಾರ್ಚ್ ಅಂತ್ಯದೊಳಗೆ ಒಂದು ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.