ಬೆಂಗಳೂರು: ಸಿಎಂ ಸಂಪುಟ ಸಹೋದ್ಯೋಗಿಗಳಿಗೆ ಕೋವಿಡ್ ಬೆಂಬಿಡದೇ ಕಾಡುತ್ತಿದ್ದು, ಇದೀಗ ವಸತಿ ಸಚಿವ ವಿ. ಸೋಮಣ್ಣಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಸಿಎಂ ಸಭೆಯಲ್ಲಿ ಸೋಮಣ್ಣ ಭಾಗವಹಿಸಿದ್ದು, ಸಚಿವರು, ಅಧಿಕಾರಿಗಳಲ್ಲೂ ಕೋವಿಡ್ ಭೀತಿ ಎದುರಾಗಿದೆ.
ಕೋವಿಡ್ ದೃಢಪಟ್ಟ ಹಿನ್ನೆಲೆ ಟ್ವೀಟ್ ಮಾಡಿರುವ ಸಚಿವ ಸೋಮಣ್ಣ, ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಮನವಿ ಮಾಡಿದ್ದಾರೆ.