ಬೆಂಗಳೂರು:ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ ಸಂತ್ರಸ್ತೆ ಪರ ವಕೀಲ ಕೆ.ಎನ್.ಜಗದೀಶ್, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ರಾಜೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಗೆ ಎಸಿಪಿ ಕಿರುಕುಳ ಕೊಟ್ಟಿದ್ದು, ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ. ಪ್ರಕರಣ ಹಿಂಪಡೆಯಲು ಹಣದ ಆಮಿಷ ವೊಡ್ಡಿದ್ದಾರೆಂದು ಆರೋಪ ಮಾಡಿದ್ದಾರೆ.
ಪ್ರಕರಣದಲ್ಲಿ ಎಸಿಪಿ ಅವರನ್ನ ತಪ್ಪಿತಸ್ಥ ಎಂದು ಸಾಬೀತು ಪಡಿಸಲು ಕಾನೂನು ಪ್ರಕ್ರಿಯೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಶಾಸಕ ರಾಜಕುಮಾರ್ ಪಾಟೀಲ ವಿರುದ್ಧ ಸಿಬಿಐನಲ್ಲಿ ವಂಚನೆ, ನಕಲಿ ಮಾಡಿದ ಆರೋಪವಿದೆ. ವಂಚನೆ ಆರೋಪ ಹೊತ್ತಿರುವ ಶಾಸಕರು ಅಮಾಯಕ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ್ದಾರೆ. ಜತೆಗೆ ಸುಳ್ಳು ಕೇಸ್‌ಗಳನ್ನು ದಾಖಲಿಸಿದ್ದಾರೆ. ಮಾಡಿರುವ ಮೆಸೇಜ್ಗಳು ಸೇರಿ ಎಲ್ಲ ರೀತಿಯ ಸಾಕ್ಷ್ಯಗಳು ನಮ್ಮ ಬಳಿ ಇವೆ ಎಂದಿದ್ದಾರೆ.