ಬೆಂಗಳೂರು:ಹುಳಿಮಾವು ಕೆರೆ ದಂಡೆ ಒಡೆದು ಸಾವಿರಾರು ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಘಟನೆ ಸಂಭವಿಸಿ ಮೂರು ದಿನವಾದರೂ ಇಲ್ಲಿನ ಶಾಸಕರು ಇತ್ತ ತಿರುಗಿಯೂ ನೋಡಿಲ್ಲ.
ಅಂದಾಜು ₹ 80 ಕೋಟಿಗೂ ಅಧಿಕ ನಷ್ಟವಾಗಿದೆ. ನೂರಾರು ಜನ ಬೀದಿಗೆ ಬಂದಿದ್ದಾರೆ. ಆದರೆ, ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಇಲ್ಲಿನ ಸಂತ್ರಸ್ತರಿಗೆ ಸಾಂತ್ವನ ಹೇಳುವ ಪ್ರಯತ್ನಕ್ಕೂ ಮುಂದಾಗಿಲ್ಲ. ಕನಿಷ್ಠ ಅಧಿಕಾರಿಗಳನ್ನ ಸಂಪರ್ಕಿಸಿ ಸರಿಯಾದ ರೀತಿಯಲ್ಲಿ ಕೆಲಸ ಮಾಡಲು ಸೂಚಿಸಬಹುದಾಗಿತ್ತು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.