ಬೆಂಗಳೂರು:ತುಮಕೂರು ಜಿಲ್ಲೆಯ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರ ಸ್ಥಿತಿ ಗಂಭೀರವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿರಾ ಶಾಸಕ ಸತ್ಯನಾರಾಯಣ ಸ್ಥಿತಿ ಗಂಭೀರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ - ತುಮಕೂರು ಜಿಲ್ಲೆ ಸುದ್ದಿ
ತುಮಕೂರು ಜಿಲ್ಲೆಯ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿರಾ ಶಾಸಕ ಸತ್ಯನಾರಾಯಣ
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಲಿವರ್ಗೆ (ಯಕೃತ್) ಸಂಬಂಧಿಸಿದ ಬಹು ಅಂಗಾಂಗ ವೈಫಲ್ಯದೊಂದಿಗೆ ಸೆಪ್ಟಿಸೆಮಿಯಾ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಮನೀಶ್ ರೈ ಮಾಹಿತಿ ನೀಡಿದ್ದಾರೆ.