ಕರ್ನಾಟಕ

karnataka

ETV Bharat / city

ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎಸ್.ವಿ.ರಾಮಚಂದ್ರ - ಶಾಸಕ ಎಸ್.ವಿ.ರಾಮಚಂದ್ರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎಸ್.ವಿ.ರಾಮಚಂದ್ರ ಅವರು, ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದರು.

MLA S.V.Ramachandra
MLA S.V.Ramachandra

By

Published : Aug 6, 2020, 4:58 PM IST

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ಅವರು ಇಂದು ವಸಂತ ನಗರದ ನಿಗಮ ಕಚೇರಿಯಲ್ಲಿ ಸರಳವಾಗಿ ಅಧಿಕಾರ ಸ್ವೀಕರಿಸಿದರು. ನಂತರ ಅಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ ಸಭೆ ನಡೆಸಿ, ನಿಗಮದ ಕ್ರಿಯಾ ಯೋಜನೆ ಕುರಿತು ಚರ್ಚಿಸಿದರು.

ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎಸ್.ವಿ.ರಾಮಚಂದ್ರ

ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಭೂ ಒಡೆತನ, ಗಂಗಾಕಲ್ಯಾಣ, ಸ್ವಯಂ ಉದ್ಯೋಗ, ಮೈಕ್ರೋ ಕ್ರೆಡಿಟ್ ಯೋಜನೆ, ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯಮ ಶೀಲತಾ ಯೋಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗುವುದು. ಜಿಲ್ಲಾ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನೆ ನಡೆಸಿ, ತಾಂತ್ರಿಕ ಸಮಸ್ಯೆಗಳ ಇತ್ಯರ್ಥಕ್ಕೂ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ನಿಗಮದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಮುದಾಯದ ಏಳಿಗೆಗಾಗಿ ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ನೂತನ ಅಧ್ಯಕ್ಷ ರಾಮಚಂದ್ರ ಮನವಿ ಮಾಡಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಹನುಮನರಸಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details