ಬೆಂಗಳೂರು: ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪತ್ನಿ ಸವಿತಾರೊಂದಿಗೆ ಸಂಸಾರ ಮಾಡಲು ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಶಾಸಕನ ವಿಚ್ಚೇದನ ಪ್ರಕರಣ: ಕೌಟುಂಬಿಕ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲು ಹೈಕೋರ್ಟ್ ಆದೇಶ - High Court
ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪತ್ನಿ ಸವಿತಾರೊಂದಿಗೆ ಸಂಸಾರ ಮಾಡಲು ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಪತಿ-ಪತ್ನಿಯರು ಮೈಸೂರು ಕೌಟುಂಬಿಕ ನ್ಯಾಯಾಲಯದ ಮುಂದೆ ಸೆಪ್ಟೆಂಬರ್ 3 ರಂದು ಹಾಜರಾಗಿ ತಮ್ಮ ಅಹವಾಲು ಸಲ್ಲಿಸುವಂತೆ ನಿರ್ದೇಶಿಸಿದೆ.
ಈ ಕುರಿತು ಎಂ.ಪಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ, ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಶಾಸಕ ಎಂ.ಪಿ. ಕುಮಾರಸ್ವಾಮಿ, ಪತ್ನಿ ಸವಿತಾರಿಂದ ಪ್ರತ್ಯೇಕಗೊಂಡು ಜೀವನ ನಡೆಸುತ್ತಿದ್ದರು. ಇದರಿಂದ ತಮ್ಮ ವೈವಾಹಿಕ ಸಂಬಂಧವನ್ನು ಮರು ಸ್ಥಾಪಿಸಲು ಕೋರಿ ಸವಿತಾ ಅವರು ಮೈಸೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪುರಸ್ಕರಿಸಿದ ಮೈಸೂರು ಕೌಟುಂಬಿಕ ನ್ಯಾಯಾಲಯ ಗಂಡನ ಜೊತೆಗೆ ಬಾಳುವಂತೆ ಆದೇಶಿಸಿತ್ತು.
ಇದೀಗ ಆ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್, ಪತಿ-ಪತ್ನಿಯರು ಮೈಸೂರು ಕೌಟುಂಬಿಕ ನ್ಯಾಯಾಲಯದ ಮುಂದೆ ಸೆಪ್ಟೆಂಬರ್ 3 ರಂದು ಹಾಜರಾಗಿ ತಮ್ಮ ಅಹವಾಲು ಸಲ್ಲಿಸುವಂತೆ ನಿರ್ದೇಶಿಸಿದೆ.