ಕರ್ನಾಟಕ

karnataka

ETV Bharat / city

ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ದೇವೇಗೌಡರ ಕುಟುಂಬ ಅನ್ಯಾಯ ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ - tumkur mlc election congress candidate rajendra

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್​ ಮುಖಂಡರು ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆ ವಿಚಾರದಲ್ಲಿ ಅನ್ಯಾಯ ಮಾಡಿದ್ದಾರೆ ಎಂದು ವಿಧಾನ ಪರಿಷತ್​ ಚುನಾವಣೆ ಕಾಂಗ್ರೆಸ್​ ಅಭ್ಯರ್ಥಿ ರಾಜೇಂದ್ರ ಹೇಳಿದರು.

mlc-candidate-rajendra-slams-hd-devegowda-family
ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ

By

Published : Dec 3, 2021, 3:06 PM IST

ತುಮಕೂರು: ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ದೇವೇಗೌಡರ ಕುಟುಂಬ ಅನ್ಯಾಯ ಮಾಡಿದೆ ಎಂದು ವಿಧಾನ ಪರಿಷತ್​ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ದೂರಿದರು.

ಜೆಡಿಎಸ್​ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ

ನಗರದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ನಾವು ಕಾರಣರಲ್ಲ. ಅನೇಕ ವರ್ಷಗಳಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆ ವಿಷಯದಲ್ಲಿ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಅವರಿಗೆ ಸೋಲು ಉಂಟಾಯಿತು ಎಂದು ಹೇಳಿದರು.

ಕಳೆದ ಮೂರು ತಿಂಗಳಿನಿಂದ ಹಾಗೂ ನಿರಂತರ ಸೋಲಿನ ನಂತರ ಜನರೊಂದಿಗೆ ಬೆರೆತು ಹಾಗೂ ಮತದಾರರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ಹೀಗಾಗಿ ಈ ಬಾರಿ ನಾನು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ರಾಜೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details