ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾ.): ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ಲೋಕಾರ್ಪಣೆಗೊಂಡ ನೂತನ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿ ಕಳವು ಮಾಡಲಾಗಿದೆ. ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಹುಂಡಿ ಒಡೆದು, ಅದರಲ್ಲಿದ್ದ ಕಾಣಿಕೆ ಹಣ ದೋಚಿ ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ: ನೂತನ ಚೌಡೇಶ್ವರಿ ದೇವಾಲಯದ ಹುಂಡಿ ಒಡೆದು ಹಣ ದೋಚಿದ ಖದೀಮರು
ಮೂರು ತಿಂಗಳ ಹಿಂದಷ್ಟೇ ಲೋಕಾರ್ಪಣೆಗೊಂಡ ನೂತನ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿ ಕಳವು ಮಾಡಲಾಗಿದೆ.
ದೊಡ್ಡಬಳ್ಳಾಪುರದ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿ ಹಣ ಕಳವು
ದೇವಸ್ಥಾನ ಉದ್ಘಾಟನೆಯಾಗಿ 3 ತಿಂಗಳು ಆಗಿರಲಿಲ್ಲ. ಹಾಗಾಗಿ ಹುಂಡಿ ಹಣ ಎಣಿಕೆ ಮಾಡಿರಲಿಲ್ಲ. ಹುಂಡಿಯಲ್ಲಿ ಭಾರಿ ಹಣ ಇರಬಹುದು ಎಂದು ಹುಂಡಿ ಒಡೆದ ಖದೀಮರು ಹಣದೊಂದಿಗೆ ಪರಾರಿಯಾಗಿದ್ದಾರೆ. ಶನಿವಾರ ಬೆಳಗ್ಗೆ ಎಂದಿನಂತೆ ದೇವರ ಪೂಜೆ ಮಾಡಲು ಬಂದು ದೇವಸ್ಥಾನದ ಬಾಗಿಲು ತೆಗೆದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಹುಂಡಿಯಲ್ಲಿದ್ದ ಅಂದಾಜು 30-40 ಸಾವಿರ ಕಾಣಿಕೆ ಹಣ ಕಳ್ಳರ ಪಾಲಾಗಿದೆ ಎನ್ನಲಾಗ್ತಿದೆ.
ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.