ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ. ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹೊಸ ಮಾದರಿಯ 75 ಎಲೆಕ್ಟ್ರಿಕ್ ಬಸ್ಸುಗಳನ್ನು ರಸ್ತೆಗಿಳಿಸಲು ಬಿಎಂಟಿಸಿ ಸಿದ್ಧತೆ ಮಾಡಿಕೊಂಡಿದೆ.
ಸ್ವಿಚ್ ಮೊಬಿಲಿಟಿ ಲಿಮಿಟೆಡ್ನಿಂದ 12 ಮೀಟರ್ ಉದ್ದದ ನಾನ್ ಎಸಿ ಎಲೆಕ್ಟ್ರಿಕ್ ಬಸ್ಸುಗಳು ರಸ್ತೆಗಿಳಿಯಲಿವೆ. ಆ.14 ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಸ್ಸುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಬಿಎಂಟಿಸಿ ಸಂಸ್ಥೆಯ ಅಧ್ಯಕ್ಷ ನಂದೀಶ್ ರೆಡ್ಡಿ ತಿಳಿಸಿದ್ದಾರೆ.
ಬಿಎಂಟಿಸಿ ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯಡಿ 300 ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಟೆಂಡರ್ ಆಹ್ವಾನಿಸಿತ್ತು. 1 ಕಿ.ಲೋ ಮೀಟರ್ಗೆ 48.95 ಯಂತೆ ಸ್ವಿಚ್ ಕಂಪನಿ ಟೆಂಡರ್ ಪಡೆದು ಗುತ್ತಿಗೆ ಆಧಾರದ ಮೇಲೆ 300 ಬಸ್ಸುಗಳನ್ನು ಒದಗಿಸಲಿದೆ ಎಂದಿದ್ದಾರೆ.