ಬೆಂಗಳೂರು :ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ನೇಮಕ ಮಾಡಿರುವ ಕ್ಲೇಮ್ ಕಮಿಷನರ್ಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಪ್ರಕರಣ ಸಂಬಂಧ ಕ್ಲೇಮ್ ಕಮಿಷನರ್ ನೇಮಕ ಮಾಡಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿದೆ.
ಕ್ಲೇಮ್ ಕಮಿಷನರ್ಗೆ ಹೆಚ್ಚಿನ ಅಧಿಕಾರ : ಸರ್ಕಾರದ ನಿಲುವು ಕೇಳಿದ ಹೈಕೋರ್ಟ್ - ಬೆಂಗಳೂರು ಸುದ್ದಿ
ಹೇಳಿಕೆ ದಾಖಲಿಸಿಕೊಂಡ ಪೀಠ, ಈ ಬಗ್ಗೆ ಉತ್ತರ ನೀಡುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿ ಸೆ. 29ಕ್ಕೆ ವಿಚಾರಣೆ ಮುಂದೂಡಿತು..
ವಿಚಾರಣೆ ವೇಳೆ ವಕೀಲ ಶ್ರೀಧರ್ ಪ್ರಭು ವಾದಿಸಿ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಕ್ಲೇಮ್ ಕಮಿಷನರ್ ನೇಮಕ ಮಾಡಲಾಗಿದೆ. ಆದರೆ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳು, ಸಂತ್ರಸ್ತರನ್ನು ವಿಚಾರಣೆಗೆ ಕರೆಸಲು ಸಮನ್ಸ್ ಜಾರಿಗೊಳಿಸಲು ಹಾಗೂ ಘಟನೆಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನು ಸಂಗ್ರಹಿಸಲು ವಿಚಾರಣಾ ಆಯೋಗಗಳ ಕಾಯ್ದೆ-1952ರಲ್ಲಿ ಪ್ರದತ್ತವಾದ ಕೆಲ ಅಧಿಕಾರಗಳನ್ನು ಕ್ಲೇಮ್ ಕಮಿಷನರ್ ಅವರಿಗೆ ನೀಡಬೇಕಾಗುತ್ತದೆ ಎಂದು ಪೀಠಕ್ಕೆ ವಿವರಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಈ ಬಗ್ಗೆ ಉತ್ತರ ನೀಡುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿ ಸೆ. 29ಕ್ಕೆ ವಿಚಾರಣೆ ಮುಂದೂಡಿತು.