ಕರ್ನಾಟಕ

karnataka

ETV Bharat / city

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾರ್ಥಿ ವೇತನ: ಕೇಂದ್ರದ ನಿರ್ಧಾರಕ್ಕೆ ಕಟೀಲ್ ಮೆಚ್ಚುಗೆ - More Scholarship for Scheduled Caste Students: Katil Appreciation

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟವು 59,048 ಕೋಟಿ ರೂಪಾಯಿಗಳನ್ನು ಮುಂದಿನ 5 ಶೈಕ್ಷಣಿಕ ವರ್ಷಗಳಲ್ಲಿ ನೀಡಲಿದ್ದು, ಸಮುದಾಯದ ಭಾಗ್ಯದ ಬಾಗಿಲನ್ನು ತೆರೆದಂತಾಗಿದೆ. ಇದಕ್ಕಾಗಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ನಳಿನ್ ‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್

By

Published : Dec 24, 2020, 7:00 PM IST

ಬೆಂಗಳೂರು:ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 59,048 ಕೋಟಿ ರೂಪಾಯಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ‌ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೂರದೃಷ್ಟಿ ಇರುವ ರಾಷ್ಟ್ರ ನಾಯಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ನಿರ್ಣಯದಿಂದ ಸಾಮಾಜಿಕ ಸಮಾನತೆಯ ಕನಸು ನನಸಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಈ ಯೋಜನೆಯಡಿ 59,048 ಕೋಟಿ ರೂಪಾಯಿಗಳನ್ನು ಮುಂದಿನ 5 ಶೈಕ್ಷಣಿಕ ವರ್ಷಗಳಲ್ಲಿ ನೀಡಲಿದ್ದು, ಸಮುದಾಯದ ಭಾಗ್ಯದ ಬಾಗಿಲನ್ನು ತೆರೆದಂತಾಗಿದೆ. ಇದಕ್ಕಾಗಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಕೇಂದ್ರದ ಈ ನಿರ್ಧಾರ ಕಡು ಬಡತನದಿಂದ ಉನ್ನತ ಶಿಕ್ಷಣಕ್ಕೆ ತೆರಳಲು ಸಾಧ್ಯವಾಗದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರವಾಗಲಿದೆ. ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದರಿಂದ ಅವ್ಯವಹಾರಕ್ಕೆ ಅವಕಾಶವೇ ಇರಲಾರದು ಎಂದು ಕಟೀಲ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

For All Latest Updates

ABOUT THE AUTHOR

...view details