ಬೆಂಗಳೂರು :ರಾಜ್ಯರಾಜಧಾನಿಯೂ ಸೇರಿದಂತೆ ಬೆಂಗಳೂರು ನಗರ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚಾಗುತ್ತಿರುವ ಪ್ರದೇಶಗಳಲ್ಲಿ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸುವ ಸಂಬಂಧ ತುರ್ತು ಸಭೆ ನಡೆಸಿದರು. ಸಚಿವರುಗಳಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಬಿ ಹೆಚ್ ಅನಿಲ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳಿದ್ದ ಈ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಕೊರೊನಾ ಕುರಿತ ತುರ್ತು ಸಭೆಯ ಪ್ರಮುಖಾಂಶಗಳು :
* ಬೆಂಗಳೂರು ನಗರ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿ ಪತ್ತೆಯಾಗುತ್ತಿರುವ ಪ್ರದೇಶಗಳಲ್ಲಿ ಲಾಕ್‌ಡೌನ್ ಪ್ರಕ್ರಿಯೆ ಕಟ್ಟುನಿಟ್ಟಾಗಿ ಜಾರಿಯಾಗಬೇಕು.
*ಕ್ವಾರಂಟೈನ್ ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚನೆ.