ಕರ್ನಾಟಕ

karnataka

ETV Bharat / city

ರಾಜ್ಯಾದ್ಯಂತ ಸೂಸೂತ್ರವಾಗಿ ನಡೆದ ಪಿಯುಸಿ ಇಂಗ್ಲಿಷ್​ ಪರೀಕ್ಷೆ.. 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು!

ಇಂದು ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯಲ್ಲಿ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿರುವುದು ತಿಳಿದು ಬಂದಿದೆ.

students absent in PUC English Examination, Karnataka puc exam, PUC English Exam, Karnataka students absent in PUC Exam, ಪಿಯುಸಿ ಇಂಗ್ಲಿಷ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈರು, ಕರ್ನಾಟಕ ಪಿಯುಸಿ ಪರೀಕ್ಷೆ, ಪಿಯುಸಿ ಇಂಗ್ಲಿಷ್ ಪರೀಕ್ಷೆ, ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈರು,
ವಿದ್ಯಾರ್ಥಿಗಳು ಗೈರು

By

Published : May 6, 2022, 2:56 PM IST

ಬೆಂಗಳೂರು: ರಾಜ್ಯದಲ್ಲಿಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯಲ್ಲಿ ಸುಮಾರು 33,782 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಹೊಸಬರು, ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಸೇರಿ ಇಂಗ್ಲಿಷ್​​ ಪರೀಕ್ಷೆಗೆ 6,32,202 ವಿದ್ಯಾರ್ಥಿಗಳು ನೋಂದಾಯಿಸಿದ್ದು, 5,98,420 ವಿದ್ಯಾರ್ಥಿಗಳು ಹಾಜರಾಗಿದ್ರೆ, 33,782 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಓದಿ:ದ್ವಿತೀಯ ಪಿಯುಸಿ : ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದ ಜೀವಶಾಸ್ತ್ರ, ಭೂಗೋಳಶಾಸ್ತ್ರ ಪರೀಕ್ಷೆ

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಗೈರು ಹಾಜರಿ ಸಂಖ್ಯೆ ಹೆಚ್ಚಿದೆ. ಹೊಸಬರು 24,774, ಪುನರಾವರ್ತಿತ ವಿದ್ಯಾರ್ಥಿಗಳು 6,646 ಹಾಗೂ ಖಾಸಗಿಯ 2,362 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇನ್ನು ಪರೀಕ್ಷೆಯ ಸಮಯದಲ್ಲಿ ಅಕ್ರಮ ಅಥವಾ ಅವ್ಯವಹಾರದಲ್ಲಿ ಯಾರು ಭಾಗಿಯಾಗಿಲ್ಲ. ಯಾವುದೇ ವಿದ್ಯಾರ್ಥಿಯು ಡಿಬಾರ್ ಆಗಿಲ್ಲ. ಹಾಗೇ ಯಾವುದೇ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ ಅಂತ ಪಿಯು ಬೋರ್ಡ್ ತಿಳಿಸಿದೆ.

ABOUT THE AUTHOR

...view details