ಬೆಂಗಳೂರು: ಕೊರೊನಾ ಕಾರಣದಿಂದಾಗಿ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತದ ಕೊರತೆ ಎದುರಾಗಿದೆ. ಹಾಗಾಗಿ ರಕ್ತದಾನ ಮಾಡಲು ಯೋಗ್ಯರಿರುವವರು ತಮ್ಮ ಹತ್ತಿರದ ರಕ್ತನಿಧಿ ಕೇಂದ್ರಗಳಿಗೆ ಭೇಟಿ ನೀಡಿ ರಕ್ತದಾನ ಮಾಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಕರೆ ನೀಡಿದರು.
ರಕ್ತದಾನ ಮಾಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಮನವಿ - ಸಂಸದೆ ಶೋಭಾ ಕರಂದ್ಲಾಜೆ ರಕ್ತ ದಾನ ನ್ಯೂಸ್
ಕೋವಿಡ್ ಹಿನ್ನೆಲೆ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದ ಅಭಾವ ಉಂಟಾಗಿದೆ. ರಕ್ತದಾನ ಮಾಡಲು ಯೋಗ್ಯರಿರುವ ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಹತ್ತಿರದ ರಕ್ತನಿಧಿ ಕೇಂದ್ರಗಳಿಗೆ ಭೇಟಿ ನೀಡಿ ರಕ್ತದಾನ ಮಾಡಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಕರೆ ನೀಡಿದ್ದಾರೆ.
ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ರಕ್ತದಾನ ಮಾಡಿ ನಂತರ ಮಾತನಾಡಿದ ಅವರು, ಪ್ರತಿ 3 ತಿಂಗಳಿಗೊಂದು ಬಾರಿ ರಕ್ತ ದಾನ ಮಾಡುತ್ತೇನೆ. ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿ ಪ್ರತಿ ತಿಂಗಳು ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಉಚಿತವಾಗಿ ರಕ್ತ ಒದಗಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಇಲ್ಲಿ ರಕ್ತದಾನ ಮಾಡಿದ್ದೇನೆ ಎಂದು ತಿಳಿಸಿದರು.
ಕೋವಿಡ್ ಕಾರಣದಿಂದಾಗಿ ದೇಶದೆಲ್ಲೆಡೆ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದ ಅಭಾವ ಉಂಟಾಗಿದೆ. ಈ ಕಾರಣದಿಂದಾಗಿ ತುರ್ತು ರಕ್ತದ ಅಗತ್ಯವಿರುವವರಿಗೆ ಸಕಾಲದಲ್ಲಿ ರಕ್ತ ದೊರಕುತ್ತಿಲ್ಲ. ರಕ್ತದಾನ ಮಾಡಲು ಯೋಗ್ಯರಿರುವ ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಹತ್ತಿರದ ರಕ್ತನಿಧಿ ಕೇಂದ್ರಗಳಿಗೆ ಭೇಟಿ ನೀಡಿ ರಕ್ತದಾನ ಮಾಡಿ. ಈ ಮೂಲಕ ಅಶಕ್ತರಿಗೆ, ರಕ್ತದ ಅವಶ್ಯಕತೆಯಿರುವ ಎಲ್ಲರ ಬಾಳಲ್ಲಿ ಭರವಸೆಯ ಬೆಳಕನ್ನು ಮೂಡಿಸುವ ಪ್ರಯತ್ನ ಮಾಡೋಣ ಎಂದರು.
TAGGED:
ರಾಷ್ಟ್ರೋತ್ಥಾನ ರಕ್ತ ನಿಧಿ