ಕರ್ನಾಟಕ

karnataka

ETV Bharat / city

ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ.. ಯಾವ ಖಾತೆಯಾದ್ರೂ ನಿಭಾಯಿಸುವೆ- ಎಂಟಿಬಿ ನಾಗರಾಜ್

ಅಧಿವೇಶನಕ್ಕೂ ಮುಂಚೆ ಸಚಿವ ಸ್ಥಾನ ಕೊಡ್ತೀವಿ ಅಂತಾ ಯಡಿಯೂರಪ್ಪ ಭರವಸೆ ಕೊಟ್ಟಿದ್ರು. ಈಗಾಗಲೇ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ಮಾಡಿ ಬಂದಿದ್ದಾರೆ. ಅದೇನು ತೀರ್ಮಾನ ಆಗಿದೆ ಅಂತಾ ಗೊತ್ತಾಗಲಿಲ್ಲ..

mpb-nagaraj-reaction-on-minister-post
ಎಂಟಿಬಿ ನಾಗರಾಜ

By

Published : Sep 21, 2020, 9:44 PM IST

ಹೊಸಕೋಟೆ :ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿರುವ ಭರವಸೆಯಂತೆ ಸಚಿವ ಸ್ಥಾನ ನೀಡುತ್ತಾರೆ. ಆದರೆ, ಕೆಲವು ಕಾರಣಗಳಿಂದ ವಿಳಂಬವಾಗಿದೆ. ಅದಕ್ಕೆ ಬೇರೆ ಯಾವುದೇ ಕಾರಣವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ಹೊಸಕೋಟೆ ನಗರದ 28ನೇ ವಾರ್ಡಿನಲ್ಲಿ ನಗರಸಭಾ ಸದಸ್ಯೆ ಆಶಾ ರಾಜಶೇಖರ್ ಅವರು‌ ಹಮ್ಮಿಕೊಂಡಿದ್ದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮಗೆ ಯಾವುದೇ ಖಾತೆ ನೀಡಿದ್ರೂ ಸಮರ್ಥವಾಗಿ ನಿಭಾಯಿಸುತ್ತೇನೆ ಹಾಗೂ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಸಚಿವ ಸ್ಥಾನಕ್ಕೆ ಹೈಕಮಾಂಡ್​ನಿಂದ ಸಿಗದ ಗ್ರಿನ್ ಸಿಗ್ನಲ್

ನಗರದಲ್ಲಿರುವ 31 ವಾರ್ಡ್‌ಗಳಲ್ಲಿ ಈಗಾಗಲೇ 24 ವಾರ್ಡ್‌ಗಳಲ್ಲಿ ಆಯುಷ್ಮಾನ್ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ವಾರ್ಡ್‌ಗಳು ಹಾಗೂ ತಾಲೂಕಿನ ಪ್ರತಿ ಹಳ್ಳಿಗಳಿಗೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಸಚಿವ ಸ್ಥಾನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ, ರೆಡ್ ಸಿಗ್ನಲ್ ಸಿಕ್ಕಿದೆ. ಅಧಿವೇಶನಕ್ಕೂ ಮುಂಚೆ ಸಚಿವ ಸ್ಥಾನ ಕೊಡ್ತೀವಿ ಅಂತಾ ಯಡಿಯೂರಪ್ಪ ಭರವಸೆ ಕೊಟ್ಟಿದ್ರು. ಈಗಾಗಲೇ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ಮಾಡಿ ಬಂದಿದ್ದಾರೆ. ಅದೇನು ತೀರ್ಮಾನ ಆಗಿದೆ ಅಂತಾ ಗೊತ್ತಾಗಲಿಲ್ಲ. ಆರ್‌. ಶಂಕರ್ ಅವರು ಫೋನ್ ಮಾಡಿದ್ರೂ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡಬೇಕು ಎಂದು ಹೇಳಿದರು.

ABOUT THE AUTHOR

...view details