ಕರ್ನಾಟಕ

karnataka

ETV Bharat / city

'ಸುಮಲತಾ-ಹೆಚ್​ಡಿಕೆ ನಡುವಿನ ವಾಕ್ಸಮರ ಮೈ ಶುಗರ್ ಕಾರ್ಖಾನೆ ವಿಚಾರದಲ್ಲೂ ಮುಂದುವರೆದಿದೆ' - ಮೈ ಶುಗರ್ ಕಾರ್ಖಾನೆ

ಮೈ ಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರೈತರು ಮತ್ತು ಹೋರಾಟಗಾರರ ವಿರೋಧವಿದೆ. ಕುಮಾರಸ್ವಾಮಿ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಖಾಸಗೀಕರಣ ಮಾಡದಂತೆ ಮನವಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮತ್ತು ಹೆಚ್​ಡಿಕೆ ನಡುವೆ ವಾಕ್ಸಮರ ಮುಂದುವರೆದಿದೆ ಎಂದು ಎಂಟಿಬಿ ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.

MTB Nagaraj
ಎಂಟಿಬಿ ನಾಗರಾಜ್

By

Published : Jul 7, 2021, 6:36 PM IST

ದೊಡ್ಡಬಳ್ಳಾಪುರ: ಮಂಡ್ಯ ಲೋಕಸಭಾ ಚುನಾವಣೆ ನಂತರ ಮೈ ಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡುವೆ ವಾಕ್ಸಮರ ನಡೆಯುತ್ತಿದೆ ಎಂದು ಎಂಟಿಬಿ ನಾಗರಾಜ್ ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್

ದೊಡ್ಡಬಳ್ಳಾಪುರ ನಗರದಲ್ಲಿ ನಡೆದ ಮೇಕ್‌ ಶಿಫ್ಟ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ವೇಳೆ ಮಾತನಾಡಿದ ಎಂಟಿಬಿ, ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ನಷ್ಟಕ್ಕೆ ತುತ್ತಾಗಿ ಫ್ಯಾಕ್ಟರಿ ಬಂದ್ ಮಾಡಲಾಗಿದೆ. ಸರ್ಕಾರ 40 ವರ್ಷ ಖಾಸಗಿಯವರಿಗೆ ಗುತ್ತಿಗೆ ನೀಡಲು ಟೆಂಡರ್ ಕರೆಯಲು ಸಿದ್ಧತೆ ನಡೆಸಿದೆ. ಆದರೆ ಮೈ ಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರೈತರು ಮತ್ತು ಹೋರಾಟಗಾರರ ವಿರೋಧವಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಖಾಸಗೀಕರಣ ಮಾಡದಂತೆ ಮನವಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮತ್ತು ಹೆಚ್​ಡಿಕೆ ನಡುವೆ ವಾಕ್ಸಮರ ಮುಂದುವರೆದಿದೆ. ಕಾರ್ಖಾನೆ ಪ್ರಾರಂಭವಾಗಬೇಕೆಂಬುದು ಸುಮಲತಾ ವಾದ ಎಂದರು.

ಇನ್ನು ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಸಭೆ ಮಾಡಲಾಗಿದೆ. ಅಲ್ಲಿನ ರೈತರಿಗೆ ಹೆಚ್ಚು ಅನುಕೂಲವಾಗಬೇಕು. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಲು 10 ರಿಂದ 15 ಕಿ.ಮೀ ದೂರ ಹೋಗಬೇಕು, ಇದರಿಂದ ರೈತರಿಗೆ ಹೊರೆಯಾಗಲಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸಿ, ಸಮಸ್ಯೆ ಇತ್ಯರ್ಥ ಮಾಡುವಂತೆ ಮನವಿ ಮಾಡಲಾಗಿದೆ. ಈಗಾಗಲೇ ರೈತರು, ಹೋರಾಟಗಾರರು ಮತ್ತು ಸಂಘಟನೆಗಳು ಖಾಸಗೀಕರಣ ವಿರೋಧಿಸಿ ಹೋರಾಟ ನಡೆಸಿದ್ದಾವೆ ಎಂದರು.

ABOUT THE AUTHOR

...view details