ಕರ್ನಾಟಕ

karnataka

ETV Bharat / city

ಕಾಂಗ್ರೆಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ - ಮುಖ್ಯಮಂತ್ರಿ ಚಂದ್ರು ರಾಜೀನಾಮೆ

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

mukyamanthri chandru resigned to c0ongress
ಕಾಂಗ್ರೆಸ್​ ತೊರೆದ ಮುಖ್ಯಮಂತ್ರಿ ಚಂದ್ರು

By

Published : May 29, 2022, 11:57 AM IST

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಮುಖ್ಯಮಂತ್ರಿ ಚಂದ್ರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆಂಬ ತೃಪ್ತಿಯಿದೆ ಎಂದು ತಿಳಿಸಿದ್ದಾರೆ.

ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ. ಇಂದಿನವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿದ, ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು ಎಂದು ಡಿ.ಕೆ.ಶಿವಕುಮಾರ್​ ಅವರಿಗೆ ಸಲ್ಲಿಕೆ ಮಾಡಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಮುಖ್ಯಮಂತ್ರಿ ಚಂದ್ರು ಮರು ಆಯ್ಕೆ ಆಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದರು. 68 ವರ್ಷ ವಯಸ್ಸಿನ ರಾಜಕಾರಣಿ ಈ ಬಾರಿ ವಿಧಾನಪರಿಷತ್ ಇಲ್ಲವೇ ರಾಜ್ಯಸಭೆಗೆ ಪಕ್ಷ ಪರಿಗಣಿಸಲಿದೆ ಎಂದು ನಿರೀಕ್ಷಿಸಿದ್ದರು. ಆದರೆ ಆಯ್ಕೆ ಆಗದ ಹಿನ್ನೆಲೆಯಲ್ಲಿ ಪಕ್ಷದ ಮೇಲಿನ ಬೇಸರ ಹಾಗೂ ತಮ್ಮನ್ನು ಕಾಂಗ್ರೆಸ್​ನಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೀರ್ಮಾನಿಸಿ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇದೆ.

ಇದನ್ನೂ ಓದಿ:ಅಮಲಿಹಾಳ: ಪೊಲೀಸ್ ಸರ್ಪಗಾವಲಿನ ಮಧ್ಯೆ ದಲಿತರಿಗೆ ದೇವಸ್ಥಾನ ಪ್ರವೇಶ

ಮುಖ್ಯಮಂತ್ರಿ ಚಂದ್ರು 1985 ರಿಂದ 1989ರ ಅವಧಿಯಲ್ಲಿ ಗೌರಿಬಿದನೂರು ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. 1998 ರಿಂದ 2010ರ ಅವಧಿಗೆ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 2008 ರಿಂದ 2014ರ ಅವಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಟರಾಗಿ, ರಂಗಭೂಮಿ ಕಲಾವಿದರಾಗಿ ಸಾಕಷ್ಟು ಹೆಸರು ಮಾಡಿದ್ದ ಮುಖ್ಯಮಂತ್ರಿ ಚಂದ್ರು ಸಾಕಷ್ಟು ಧಾರವಾಹಿಗಳಲ್ಲಿ ಅಭಿನಯಿಸುವ ಮೂಲಕ ಮನೆಮಾತಾಗಿದ್ದಾರೆ.

ABOUT THE AUTHOR

...view details