ಬೆಂಗಳೂರು:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2022 ರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ ‘ನನ್ನ ಮತ ನನ್ನ ಭವಿಷ್ಯ- ಒಂದು ಮತದ ಶಕ್ತಿ” ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲಾಗಿದೆ. ನಗರದ ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆ, ಸ್ಲೋಗನ್ ಸ್ಪರ್ಧೆ, ಗಾಯನ ಸ್ಪರ್ಧೆ, ಚಿತ್ರೀಕರಣ ಸ್ಪರ್ಧೆ ಹಾಗೂ ಪೋಸ್ಟರ್ ವಿನ್ಯಾಸ ಸ್ಪರ್ಧೆ ಸೇರಿದಂತೆ 5 ಬಗೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಸಂಸ್ಥೆ, ವೃತ್ತಿಪರ ಹಾಗೂ ಹವ್ಯಾಸಿ ಎಂಬ ಮೂರು ವರ್ಗಗಳಲ್ಲಿ ವಿಂಗಡಿಸಿ ಆ ಮೂಲಕ ಬಹುಮಾಹನಗಳನ್ನು ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.